Tuesday, June 18, 2024

ಸತ್ಯ | ನ್ಯಾಯ |ಧರ್ಮ

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಕಾರಿ ಅಧ್ಯಕ್ಷರಾಗಿ ನ್ಯಾ. ಡಿ. ವೈ. ಚಂದ್ರಚೂಡ್‌ ನೇಮಕ

ನವದೆಹಲಿ: ಸುಪ್ರೀಂ ಕೋರ್ಟ್‌ ಹಿರಿಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಅವರನ್ನು ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ (National Legal Services Authority) ಕಾರ್ಯಕಾರಿ ಅಧ್ಯಕ್ಷರನ್ನಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಮನಿರ್ದೇಶನ ಮಾಡಿದ್ದಾರೆ.

ಕಾನೂನು ಮತ್ತು ನ್ಯಾಯದಾನ ಇಲಾಖೆಯು ಅಧಿಕೃತ ಗೆಜೆಟ್‌ನಲ್ಲಿ ನ್ಯಾ. ಚಂದ್ರಚೂಡ್‌ ಅವರ ನೇಮಕಾತಿಯನ್ನು ಪ್ರಕಟಿಸಿದೆ. ಈ ಹಿಂದೆ ಪ್ರಾಧಿಕಾರದ ಅಧ್ಯಕ್ಷರಾಗಿ ಹಾಲಿ ನ್ಯಾಯಾಧೀಶರಾದ ಯು ಯು ಲಲಿತ್‌  ಅವರು ಇದ್ದರು.

ಡಿ. ವೈ. ಚಂದ್ರಚೂಡ್‌ ಅವರು ಅಲಾಹಾಬಾದ್‌ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಾಗಿ ಹಾಗೂ ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ಕೆಲಸ ಮಾಡಿದ್ದಾರೆ. ಸಿಜೆಐ ಯು ಯು ಲಲಿತ್‌ ಅವರ ನಿವೃತ್ತಿ ಬಳಿಕ ಚಂದ್ರಚೂಡ್‌ ಅವರು 50ನೇ ಮುಖ್ಯ ನ್ಯಾಯಾಮೂರ್ತಿಯಾಗಿ ನವೆಂಬರ್‌ನಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು