ಬಗರ್ ಹುಕುಂ ಮಂಜೂರಾತಿಗೆ ಕ್ರಮ : ಅಧಿಕಾರಿಗಳಿಗೆ ಸೂಚಿಸಿದ ಸಚಿವ ಕೃಷ್ಣಭೈರೇಗೌಡ

ಅಕ್ರಮ ಬಗರ್ ಹುಕುಂ ಸಾಗುವಳಿ ಭೂಮಿ ಶೀಘ್ರವೇ ಸಕ್ರಮಗೊಳಿಸಿಕೊಡುವಂತೆ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ವಿಕಾಸ ಸೌಧದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಸಚಿವರಿಗೆ ಬಗರ್ ಹುಕುಂ ತಂತ್ರಾಂಶ ಬಳಕೆ ಕುರಿತಾಗಿ ಪ್ರಾತ್ಯಕ್ಷಿಕೆ ತೋರಿಸಲಾಗಿದೆ.

ಈ ವೇಳೆ ಸಚಿವರು ಮಾಹಿತಿ ಪಡೆದು, ಅನಧಿಕೃತ ಸಾಗುವಳಿ ಭೂಮಿಯನ್ನು ಬಗರ್ ಹುಕುಂ ತಂತ್ರಾಂಶದ ಮೂಲಕ ಸಕ್ರಮಗೊಳಿಸುವ ಪ್ರಕ್ರಿಯೆಯನ್ನು ಶೀಘ್ರವೇ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಭೂಪರಿಶೀಲನೆಗೆ ಬಗರ್ ಹುಕುಂ ತಂತ್ರಾಂಶವನ್ನು ಕಾರ್ಯಯೋಜನೆಗೊಳಿಸಬೇಕು. ನಮೂನೆ ಸಂಖ್ಯೆ 50, 53, 57 ಅರ್ಜಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಅವುಗಳನ್ನು ನ್ಯಾಯಯುತವಾಗಿ ವಿಲೇವಾರಿ ಮಾಡಬೇಕು. ಅನಧಿಕೃತವಾಗಿ ಸಾಗುವಳಿದಾರರು ಕೃಷಿಯಲ್ಲಿ ತೊಡಗಿದ್ದರೆ ಆಕ್ರಮ ಸಕ್ರಮ ಅಡಿಯಲ್ಲಿ ಸಾಗುವಳಿ ಚೀಟಿ ನೀಡಲು ಇಲಾಖೆ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು