Thursday, July 11, 2024

ಸತ್ಯ | ನ್ಯಾಯ |ಧರ್ಮ

ಕಟ್ಟಡ ಕಾರ್ಮಿಕರ ಕಾರ್ಡ್‌ಗಳ ದುರುಪಯೋಗ ತಡೆಗಟ್ಟಲು ಕ್ರಮ ಕೈಗೊಳ್ಳಬೇಕು: ಸಿಎಂ ಸೂಚನೆ

ಪೊಲೀಸ್‌ ಕಾನ್ಸ್‌ಸ್ಟೇಬಲ್‌ ನೇಮಕಾತಿಗೆ ಸಂಬಂಧಿಸಿದಂತೆ ವಿವಿಧ ಜಿಲ್ಲೆಗಳಲ್ಲಿ 2025 ಸಿಂಧುತ್ವ ಪ್ರಮಾಣ ಪತ್ರಗಳು ವಿಲೇವಾರಿಗೆ ಬಾಕಿಯಿದೆ. ಜಿಲ್ಲಾಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸಿ ಸಿಂಧುತ್ವ ಪ್ರಮಾಣ ಪತ್ರವನ್ನು ಆದಷ್ಟು ಬೇಗನೆ ನೀಡಬೇಕು. ಪೊಲೀಸ್‌ ಗೃಹ ನಿರ್ಮಾಣಕ್ಕೆ ಸ್ಥಳ ಗುರುತಿಸಿ ಒದಗಿಸಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸೂಚಿಸಿದ್ದಾರೆ.

ಶಾಸಕರ ಪ್ರದೇಶಾಭಿವೃದ್ಧಿ ನಿಧಿಗೆ ಸಂಬಂಧಿಸಿದಂತೆ ರೂ. 1252 ಕೋಟಿ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿದ್ದು, ಇದುವರೆಗೆ ಕೋಟಿ ರೂ. ವೆಚ್ಚವಾಗಿದೆ. ಕಾಮಗಾರಿಗಳನ್ನು ನಿಗದಿತ ಅವಧಿಯ ಒಳಗಾಗಿ ಅನುಷ್ಠಾನಗೊಳಿಸುವ ಮೂಲಕ ಅನುದಾನ ವೆಚ್ಚ ಮಾಡಬೇಕು.

ಯುವ ಸಬಲೀಕರಣ
ಬೆಂಗಳೂರಿನಲ್ಲಿ ಯಲಹಂಕ ಬಳಿ 60 ಎಕ್ರೆ ಪ್ರದೇಶದಲ್ಲಿ ಕ್ರೀಡಾ ನಗರ ನಿರ್ಮಾಣಕ್ಕೆ ಜಮೀನು ಒದಗಿಸುವ ಪ್ರಸ್ತಾವನೆಯನ್ನು ಸಂಪುಟದ ಮುಂದಿರಿಸಬೇಕು. ಇದೇ ರೀತಿ ಬೆಂಗಳೂರಿನಲ್ಲಿ ನಾಲ್ಕು ಸ್ಥಳಗಳಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ತಲಾ ಕನಿಷ್ಠ 2 ಎಕರೆ ಜಮೀನು ಗುರುತಿಸಬೇಕು. ಮೈಸೂರಿನಲ್ಲಿ ಸೈಕ್ಲಿಂಗ್‌ ವೆಲೋಡ್ರಾಂ ನಿರ್ಮಾಣಕ್ಕೆ 14 ಎಕರೆ ಜಮೀನು ಹಸ್ತಾಂತರಿಸುವ ಕಾರ್ಯವನ್ನು ಆದಷ್ಟು ಬೇಗನೆ ಪೂರ್ಣಗೊಳಿಸಬೇಕು. ಕ್ರೀಡಾಂಗಣ ಇಲ್ಲದ ತಾಲೂಕುಗಳಲ್ಲಿ ಕ್ರೀಡಾಂಗಣ ನಿರ್ಮಿಸಲು ಜಮೀನು ಗುರುತಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರತಿಪಕ್ಷ ನಾಯಕ ಆರ್.ಅಶೋಕ್ ಮತ್ತು ಸಂಸದ ಸುಧಾಕರ್ ಇದ್ದ ಸಭೆಯಲ್ಲೇ ಮದ್ಯ ಹಂಚಿಕೆ

ಸಂಸ್ಕೃತಿ ಬಗ್ಗೆ , ಧರ್ಮದ ಬಗ್ಗೆ, ನೈತಿಕತೆ ಬಗ್ಗೆ ಮಾತಾಡುವವರು ಈಗ ಹಗಲಲ್ಲೇ ಮದ್ಯ ಹಂಚಿದ್ದಾರೆ, ಇದು ನೈತಿಕತೆಯಾ ಎಂದು ಪತ್ರಕರ್ತರ ಪ್ರಶ್ನೆಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯಿಸಿದರು.

Related Articles

ಇತ್ತೀಚಿನ ಸುದ್ದಿಗಳು