ಬೆಂಗಳೂರು: ಧರ್ಮಸ್ಥಳ ಸುತ್ತಮುತ್ತಲಿನ ಅರಣ್ಯ ಪ್ರದೇಶಗಳಲ್ಲಿ ಮೃತದೇಹಗಳು ಪತ್ತೆಯಾದ ವರದಿಗಳ ಹಿನ್ನೆಲೆಯಲ್ಲಿ, ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಅವರು ಪ್ರತಿಕ್ರಿಯಿಸಿದ್ದಾರೆ. “ಅಧಿಸೂಚಿತ ಅರಣ್ಯ ಪ್ರದೇಶದಲ್ಲಿ ಮೃತದೇಹಗಳನ್ನು ಅಕ್ರಮವಾಗಿ ಸಾಗಿಸಿ ಹೂತಿರುವುದು ದೃಢಪಟ್ಟರೆ ಅರಣ್ಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದು ಅವರು ಹೇಳಿದ್ದಾರೆ.
ಬೀದರ್‌ನಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಆಯೋಜಿಸಿದ್ದ ಕಾರ್ಯಕ್ರಮವೊಂದರ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ವಿಷಯ ತಿಳಿಸಿದ್ದಾರೆ.
“ತನಿಖೆ ನಡೆಯುತ್ತಿದೆ. ವರದಿಯಲ್ಲಿ ಮೃತದೇಹಗಳನ್ನು ಅಧಿಸೂಚಿತ ಅರಣ್ಯ ಪ್ರದೇಶದೊಳಗೆ ಹೂತಿರುವುದು ಕಂಡುಬಂದರೆ, ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ನಿರ್ಲಕ್ಷ್ಯಕ್ಕಾಗಿ ಶಿಸ್ತುಕ್ರಮ ಕೈಗೊಳ್ಳಲಾಗುವುದು” ಎಂದು ಖಂಡ್ರೆ ಹೇಳಿದ್ದಾರೆ.