Monday, July 14, 2025

ಸತ್ಯ | ನ್ಯಾಯ |ಧರ್ಮ

ಅಕ್ಟೋಬರ್ ನಲ್ಲಿ 7ನೇ ವೇತನ ಆಯೋಗ ರಚನೆ : ಸಿಎಂ ಬೊಮ್ಮಾಯಿ

ರಾಜ್ಯ ಸರ್ಕಾರಿ ನೌಕರರಿಗೆ ವೇತನ ಮತ್ತಿತರ ಭತ್ಯೆಗಳನ್ನು ಪರಿಷ್ಕರಿಸಲು ಇದೇ ಅಕ್ಟೋಬರ್
(October) ತಿಂಗಳಲ್ಲಿ 7ನೇ ವೇತನ ಆಯೋಗವನ್ನು (7th pay commission) ರಚಿಸಲಾಗುವುದು ಎಂದು ಸಿಎಂ ಬೊಮ್ಮಾಯಿ (CM Bommai) ಅವರು ಘೋಷಿಸಿದರು.

ಇಂದು ಮಂಗಳವಾರ ವಿಧಾನ ಸೌಧದ ಔತಣ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆಯೋಜಿಸಿದ್ದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸರ್ಕಾರಿ ನೌಕರರು (government Employees) ಸರ್ಕಾರದ ಪ್ರಮುಖವಾದ ಒಂದು ಭಾಗ ಮತ್ತು ಅಂಗ. ಬೆಳಿಗ್ಗೆಯಿಂದ ಸಂಜೆಯವರೆಗೆ ಮಾಡುವ ಕೆಲಸ ದೊಡ್ಡ ಕರ್ತವ್ಯ. ಇದಕ್ಕಾಗಿ ನಾವು ಏಳನೇ ವೇತನ ಆಯೋಗ ರಚನೆ ಮಾಡಲು ಮುಂದಾಗಿದ್ದೇವೆ ಎಂದು ಹೇಳಿದ್ದಾರೆ.

ಬದುಕಿನಲ್ಲಿ ಸೇವೆ ಮಾಡಿ ಸಂತೃಪ್ತಿ ಪಡೆಯುವುದು ಕಾಯಕ. ಸರ್ಕಾರಕ್ಕೆ ತೆರಿಗೆ ಪಾವತಿಸುವ ಪ್ರಜೆಗಳೇ ನಮ್ಮ ಮಾಲೀಕರು. ಆದಕಾರಣ, ಕಾಲಕ್ಕೆ ತಕ್ಕಂತೆ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಪ್ರಜೆಗಳ ನೋವು ನಲಿವುಗಳಿಗೆ ಸ್ಪಂದಿಸಿ ಎಂದು ಹೇಳಿದರು.

ಎಲ್ಲಾ ನೌಕರರು ಪುಣ್ಯ ಕೋಟಿ ಯೋಜನೆಯಡಿ 11,000 ರೂಪಾಯಿ ನೀಡಿ, ಗೋವುಗಳನ್ನು ದತ್ತು ಪಡೆದು, ಗೋ ಸಂರಕ್ಷಣೆ ಮಾಡುವಂತೆ ಮನವಿ ಮಾಡಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page