ಹಿರಿಯ ಕಲಾವಿದ ರಾಜು ತಾಳಿಕೋಟೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಹೃದಯಾಘಾತವಾದ ಹಿನ್ನೆಲೆಯಲ್ಲಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಾದರೂ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.
ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮದ ಮೂಲದವರಾಗಿದ್ದ ಅವರು, ಚಲನಚಿತ್ರದಲ್ಲಿ ಪ್ರಸಿದ್ಧರಾದ ನಂತರ ತಾಳಿಕೋಟಿ ನಗರದಲ್ಲಿ ವಾಸವಾಗಿದ್ದರು.
ಹೃದಯಾಘಾದಿಂದ ಮಣಿಪಾಲ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ವೈದ್ಯರ ನಿರಂತರ ಚಿಕಿತ್ಸೆ ನಂತರವೂ ಅವರು ಚಿಕಿತ್ಸೆಗೆ ಸ್ಪಂದಿಸದೇ ಇಂದು ಸಂಜೆ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಕಳೆದ ತಿಂಗಳು ಸೆ.29ರಂದು ಕನ್ನಡ ರಂಗಭೂಮಿ, ಚಲನಚಿತ್ರ ಮತ್ತು ಕಿರುತೆರೆಯ ಲೋಕದಲ್ಲಿ ವಿಶಿಷ್ಟ ಹೆಸರು ಪಡೆದ ಕಲಾವಿದ ಯಶವಂತ ಸರದೇಶಪಾಂಡೆ ನಿಧನ ಹೊಂದಿದ್ದರು. ಇದರ ಬೆನ್ನಲ್ಲೇ ಉತ್ತರ ಕರ್ನಾಟಕದ ಮತ್ತೋರ್ವ ಪ್ರತಿಭೆ ಅಸುನೀಗಿದ್ದಾರೆ.