Thursday, June 13, 2024

ಸತ್ಯ | ನ್ಯಾಯ |ಧರ್ಮ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್

ಅಚ್ಚರಿಯ ಬೆಳವಣಿಗೆಯಲ್ಲಿ ಕನ್ನಡ ಚಿತ್ರರಂಗದ ನಾಯಕನಟ ದರ್ಶನ್ ಅವರನ್ನು ಮೈಸೂರಿನ ರಾಡಿಸನ್ ಬ್ಲೂ ಹೋಟೆಲ್ ನಲ್ಲಿ ಅರೆಸ್ಟ್ ಮಾಡಲಾಗಿದೆ. ಕೊಲೆ ಪ್ರಕರಣವೊಂದರಲ್ಲಿ ನಟ ದರ್ಶನ್ ಅವರನ್ನು ಆರೋಪಿ ಆಗಿರುವ ಹಿನ್ನೆಲೆಯಲ್ಲಿ ಅವರ ಬಂಧನವಾಗಿದೆ.

ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎನ್ನುವವರ ಕೊಲೆಗೆ ಸಂಬಂಧಿಸಿದಂತೆ ಚಿತ್ರನಟ ದರ್ಶನ್ ಅವರನ್ನು ಆರೋಪಿಯನ್ನಾಗಿ ಮಾಡಲಾಗಿದೆ. ಹೆಚ್ಚಿನ ವಿಚಾರಣೆ ಹಿನ್ನೆಲೆಯಲ್ಲಿ ಅವರ ಬಂಧನವಾಗಿದೆ.

ದರ್ಶನ್ ಅವರ ಆಪ್ತ ಗೆಳತಿಯಾಗಿರುವ ಹಾಗೂ ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ವಿವಾದಕ್ಕೆ ಗುರಿಯಾದ ಪವಿತ್ರಾ ಗೌಡ ಅವರಿಗೆ ರೇಣುಕಾ ಸ್ವಾಮಿ ಅಶ್ಲೀಲ ಮೆಸೇಜ್ ಹಾಗೂ ಆನ್ಲೈನ್ ಕಿರುಕುಳ ನೀಡಿದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ದರ್ಶನ್ ಅವರನ್ನು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯನ್ನಾಗಿ ಪರಿಗಣಿಸಲಾಗಿದೆ. ಹೆಚ್ಚಿನ ಮಾಹಿತಿ ತನಿಖೆಯಿಂದ ಹೊರಬರಬೇಕಿದೆ.

ರೇಣುಕಾ ಸ್ವಾಮಿಯ ಮೃತದೇಹ ಕಾಮಾಕ್ಷಿ ಪಾಳ್ಯದಲ್ಲಿ ಪತ್ತೆಯಾಗಿತ್ತು. ಆತನ ಹಿನ್ನೆಲೆ ತಿಳಿದು ನೋಡಿದಾಗ ಒಂದೊಂದಾಗಿ ಹೆಚ್ಚಿನ ಮಾಹಿತಿಗಳು ಹೊರ ಬಿದ್ದಿದೆ. ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ 12 ಜನ ಆರೋಪಿಗಳ ಬಂಧನವಾಗಿದೆ.

Related Articles

ಇತ್ತೀಚಿನ ಸುದ್ದಿಗಳು