Wednesday, June 19, 2024

ಸತ್ಯ | ನ್ಯಾಯ |ಧರ್ಮ

ಹಿರಿಯ ನಟಿ ಲೀಲಾವತಿ ಇನ್ನಿಲ್ಲ!

ಬೆಂಗಳೂರು: ಕನ್ನಡ ಸಿನಿಮಾ ಜಗತ್ತಿನ ಖ್ಯಾತ ತಾರೆ ಲೀಲಾವತಿಯವರು ವಯೋಸಹಜ ಕಾಯಿಲೆಯಿಂದ ಇಂದು ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆ ಉಲ್ಬಣಿಸಿದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಎರಡು ದಿನಗಳಿಂದ ಅವರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡಿತ್ತು. ಇಂದು ಮಧ್ಯಾಹ್ನ ರಕ್ತದ ಒತ್ತಡ ಕುಸಿದು, ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಲೀಲಾವತಿ ಮೃತರಾಗಿದ್ದಾರೆ.

ಕೆಲವು ದಿನಗಳಿಂದ ಅನಾರೋಗ್ಯ ಕಾರಣದಿಂದಾಗಿ ಹಾಸಿಗೆ ಹಿಡಿದಿದ್ದ ಲೀಲಾವತಿಯವರನ್ನುಹಿರಿಯ ನಟಿಯರು ಸೇರಿದಂತೆ. ಅನೇಕ ಗಣ್ಯರು ಬೇಟಿ ಮಾಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಲೀಲಾವತಿ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಲೀಲಾವತಿಯರ ಚಿಕಿತ್ಸಾ ವೆಚ್ಚವನ್ನು ತಾವೇ ಭರಿಸುವುದಾಗಿ ಹೇಳಿದ್ದರು.

87 ವರ್ಷದ ಲೀಲಾವತಿಯವರನ್ನು ನಟ ದರ್ಶನ್, ಅಂಬರೀಶ್, ಗಿರಿಜಾ ಲೋಕೇಶ್ ಸೇರಿದಂತೆ ಅನೇಕರು ಅವರ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ತೋಟ ಮನೆಯಲ್ಲಿ ಭೇಟಿಯಾಗಿದ್ದರು.

ಲೀಲಾವತಿ ಪುತ್ರ ನಟ ವಿನೋದ್ ರಾಜ್, ತಾಯಿಯನ್ನು ಆಸ್ಪತ್ರೆಗೆ ದಾಖಲಿಸಿದ್ದರೂ, ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ

Related Articles

ಇತ್ತೀಚಿನ ಸುದ್ದಿಗಳು