ಬೆಂಗಳೂರು: ಕನ್ನಡ ನಟಿ ರನ್ಯಾ ರಾವ್ ಅವರಿಗೆ ಸೇರಿದ 34 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ವಶಪಡಿಸಿಕೊಂಡಿದೆ. ಚಿನ್ನದ ಕಳ್ಳಸಾಗಣೆಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಇಡಿ ಅಧಿಕಾರಿಗಳು ಶುಕ್ರವಾರ ನೀಡಿದ ವಿವರಗಳ ಪ್ರಕಾರ, ಬೆಂಗಳೂರಿನ ವಿಕ್ಟೋರಿಯಾ ಲೇಔಟ್‌ನಲ್ಲಿರುವ ಒಂದು ಮನೆ, ಅರ್ಕಾವತಿ ಲೇಔಟ್‌ನಲ್ಲಿರುವ ಒಂದು ಮನೆ, ತುಮಕೂರಿನಲ್ಲಿ ಕೈಗಾರಿಕಾ ಭೂಮಿ ಮತ್ತು ಆನೇಕಲ್ ತಾಲ್ಲೂಕಿನಲ್ಲಿ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಮಾರುಕಟ್ಟೆ ಮೌಲ್ಯ 34.12 ಕೋಟಿ ರೂ.
ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಈ ಕ್ರಮ ಕೈಗೊಳ್ಳಲಾಗಿದೆ. ಸಿಬಿಐ ಮತ್ತು ಡಿಆರ್‌ಐ ನೀಡಿದ ದೂರಿನ ಆಧಾರದ ಮೇಲೆ ಇಡಿ ಪಿಎಂಎಲ್‌ಎ ಪ್ರಕರಣ ದಾಖಲಿಸಿದೆ. ಮಾರ್ಚ್ 3 ರಂದು ಡಿಆರ್‌ಐ ಅವರನ್ನು ಬಂಧಿಸಿತ್ತು.