Tuesday, August 26, 2025

ಸತ್ಯ | ನ್ಯಾಯ |ಧರ್ಮ

ಹೊಸೂರನ್ನು ವಿಶೇಷ ಆರ್ಥಿಕ ವಲಯವಾಗಿಸಲು ವಿಮಾನ ನಿಲ್ದಾಣವೂ ಪ್ರಮುಖ ಪಾತ್ರ ವಹಿಸಲಿದೆ : ಸಿಎಂ ಸ್ಟಾಲಿನ್

ತಮಿಳುನಾಡು ಸರ್ಕಾರ ಹೊಸೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಿಸಲಿದೆ ಎಂದು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಗುರುವಾರ ವಿಧಾನಸಭೆಯಲ್ಲಿ ಘೋಷಿಸಿದರು. ಪ್ರಸ್ತಾವಿತ ವಿಮಾನ ನಿಲ್ದಾಣವು 2,000 ಎಕರೆಗಳಷ್ಟು ವ್ಯಾಪಿಸಿದ್ದು, ವಾರ್ಷಿಕವಾಗಿ ಸುಮಾರು 30 ಮಿಲಿಯನ್ ಪ್ರಯಾಣಿಕರನ್ನು ನಿರ್ವಹಿಸುವ ಗುರಿಯನ್ನು ಹೊಂದಿದೆ.

ಹೊಸೂರನ್ನು ಪ್ರಮುಖ ಆರ್ಥಿಕ ವಲಯವನ್ನಾಗಿ ಮಾಡಲು ಹೊಸೂರಿನಲ್ಲಿ ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಹೊಸೂರು ಮಾತ್ರವಲ್ಲದೇ ಕೃಷ್ಣಗಿರಿ ಮತ್ತು ಧರ್ಮಪುರಿ ಜಿಲ್ಲೆಗಳ ಸಾಮಾಜಿಕ ಅಭಿವೃದ್ಧಿಗಾಗಿ ಹೊಸೂರಿನಲ್ಲಿ ವಿಮಾನ ನಿಲ್ದಾಣದ ಅಗತ್ಯವಿದೆ ಎಂದು ತಮಿಳುನಾಡು ಸರ್ಕಾರ ಪರಿಗಣಿಸುತ್ತಿದೆ.

ಹೊಸೂರಿನಲ್ಲಿ ವರ್ಷಕ್ಕೆ 30 ಮಿಲಿಯನ್ ಪ್ರಯಾಣಿಕರನ್ನು ನಿರ್ವಹಿಸಲು 2,000 ಎಕರೆ ಪ್ರದೇಶದಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಹೇಳಿದ್ದಾರೆ.

“ಡಿಎಂಕೆ ಆಡಳಿತದ ದ್ರಾವಿಡ ಮಾದರಿ ಸರ್ಕಾರದ ಅಡಿಯಲ್ಲಿ, ತಮಿಳುನಾಡು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಹೊಂದುತ್ತಿದೆ. ವಿಶೇಷವಾಗಿ ದೊಡ್ಡ ಕೈಗಾರಿಕೆಗಳಲ್ಲಿ ಬಹಳ ಮುಖ್ಯವಾಗಿ ಅಭಿವೃದ್ಧಿ ಹೊಂದುತ್ತಿದೆ. ಅನೇಕ ವಿಶ್ವ ಕೈಗಾರಿಕೆಗಳು ತಮಿಳುನಾಡಿನಲ್ಲಿ ಹೂಡಿಕೆ ಮಾಡಲು ಎದುರು ನೋಡುತ್ತಿವೆ” ಎಂದು ಸ್ಟಾಲಿನ್ ವಿವರಿಸಿದ್ದಾರೆ.

ಅಷ್ಟೇ ಅಲ್ಲದೇ ಜಾತಿ ಗಣತಿಯ ಬಗ್ಗೆಯೂ ಪ್ರಸ್ತಾಪಿಸಿದ ಸ್ಟಾಲಿನ್ ಸರ್ಕಾರ “ಭಾರತದ ಪ್ರತಿಯೊಬ್ಬ ನಾಗರಿಕರಿಗೂ ಶಿಕ್ಷಣ, ಆರ್ಥಿಕತೆ ಮತ್ತು ಉದ್ಯೋಗದಲ್ಲಿ ಸಮಾನ ಹಕ್ಕುಗಳು ಮತ್ತು ಸಮಾನ ಅವಕಾಶಗಳನ್ನು ಖಚಿತಪಡಿಸಿಕೊಳ್ಳಲು ನೀತಿಗಳನ್ನು ರೂಪಿಸಲು ಜಾತಿ ಆಧಾರಿತ ಜನಗಣತಿ ಅತ್ಯಗತ್ಯ ಎಂದು ಈ ಸದನ ಪರಿಗಣಿಸುತ್ತದೆ” ಎಂದು ನಿರ್ಣಯವು ಹೇಳಿದೆ.

“ಆದ್ದರಿಂದ 2021 ರಲ್ಲಿ ಜಾತಿ ಆಧಾರಿತ ಜನಗಣತಿಯೊಂದಿಗೆ ಈ ಬಾರಿಯ ಜನಗಣತಿ ಕಾರ್ಯವನ್ನು ತಕ್ಷಣವೇ ಪ್ರಾರಂಭಿಸಲು ಈ ಸದನವು ಕೇಂದ್ರ ಸರ್ಕಾರವನ್ನು ಸರ್ವಾನುಮತದಿಂದ ಒತ್ತಾಯಿಸುತ್ತದೆ” ಎಂದು ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page