ನಟಿ ರನ್ಯಾ ರಾವ್ ಅಕ್ರಮ ಚಿನ್ನ ಸಾಗಾಟ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದ್ದು, ಇಲಾಖೆಯ ಆಯುಕ್ತರು ಮಹತ್ವದ ನಿಯಮ ಜಾರಿಗೊಳಿಸಿದ್ದಾರೆ. ಅದರಂತೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಜ್ಯದ ಐಪಿಎಸ್ ಅಧಿಕಾರಿಗಳಿಗೆ ಇನ್ಮುಂದೆ ಪೊಲೀಸ್ ಸೇವೆ ನೀಡಲಾಗುವುದಿಲ್ಲ ಎಂದು ಆಯುಕ್ತರು ತಿಳಿಸಿದ್ದಾರೆ.
ಇಲಾಖೆಯ ಡಿಜಿಪಿ ರಾಮಚಂದ್ರರಾವ್ ಮಲಮಗಳಾದ ನಟಿ ರನ್ಯಾರಾವ್ ರ ಚಿನ್ನದ ಅಕ್ರಮ ಸಾಗಣೆ ಪ್ರಕರಣದಲ್ಲಿ ಶಿಷ್ಟಾಚಾರ ದುರ್ಬಳಕೆ ಕಾರಣ ಬೆಂಗಳೂರು ಏರ್ ಪೋರ್ಟ್ ನಲ್ಲಿ ಹಿರಿಯ ಐಪಿಎಸ್ ಅಧಿಕಾರಿಗಳಿಗೆ ಕಲ್ಪಿಸಲಾಗಿದ್ದ ಪೊಲೀಸ್ ಸೇವೆಯನ್ನು ಆಯುಕ್ತರು ಹಿಂಪಡೆದಿದ್ದಾರೆ.
ರನ್ಯಾ ರಾವ್, ಅಕ್ರಮ ಚಿನ್ನ ಸಾಗಾಟ ಕೇಸ್ ನಲ್ಲಿ ಇಲಾಖೆಯ ಸಿಬ್ಬಂದಿಯೇ ಭಾಗಿಯಾಗಿರುವ ಬಗ್ಗೆ ಮಾಹಿತಿ ಸಿಕ್ಕಿದ್ದು, ಈ ಹಿಂದಿ ವಿಮಾನ ನಿಲ್ದಾಣದಲ್ಲಿ ಇಲಾಖೆಯವರೂ ಅಕ್ರಮ ಚಿನ್ನ ವರ್ಗಾವಣೆಯಲ್ಲಿ ಗೊತ್ತಿದ್ದೂ ಸುಮ್ಮನಿದ್ದರು ಎಂಬ ಸತ್ಯ ತನಿಖೆಯಲ್ಲಿ ತಿಳಿದುಬಂದಿದೆ.
ಈ ಬಗ್ಗೆ ಡಿಜಿಪಿ ರಾಮಚಂದ್ರ ರಾವ್ ಅವರ ವಿಚಾರಣೆ ಕೂಡ ನಡೆದಿದೆ. ಹೆಚ್ಚಿನ ತನಿಖೆಯಲ್ಲಿ ಏರ್ ಪೋರ್ಟ್ ಸಿಬ್ಬಂದಿ ಭಾಗಿಯಾಗಿದ್ದರಿಂದಲೇ ರನ್ಯಾ, ಸುಲಭವಾಗಿ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದಳು ಎನ್ನಲಾಗಿದೆ.
ಪ್ರೋಟೋಕಾಲ್ ಸಿಬ್ಬಂದಿ ಹೇಳಿಕೆಯನ್ನು ತನಿಖಾ ವರದಿಯಲ್ಲಿ ದಾಖಲಿಸಲಾಗಿದೆ. ಈ ಮೂಲಕ ರನ್ಯಾ ಮಲತಂದೆ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಅವರಿಗೂ ಸಂಕಷ್ಟ ಎದುರಾಗಿದೆ.