ದೊಡ್ಡಬಳ್ಳಾಪುರ: ಬಿಜೆಪಿ ಜನಸ್ಪಂದನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ ನಮ್ಮ ನಾಯಕರಾದ ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಬಹಳಷ್ಟು ಯೋಜನೆಗಳ ಅನುಷ್ಟಾನವನ್ನು ಮಾಡಿದ್ದೇವೆ ಎಂದು ಹೇಳಿದರು.
ಕೋವಿಡ್ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ದೇಶದ 130 ಕೋಟಿ ಜನರ ಬಳಿಗೆ ಹೋಗಿ ಉಚಿತ ಲಸಿಕೆಯನ್ನು ಕೊಡುವ ಮೂಲಕ ಕೋವಿಡ್ ಅನ್ನು ಎದುರಿಸಿದ್ದೇವೆ. ಆದರೆ ಈ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರವಿದ್ದರೆ ಜನರನ್ನು ನರಕಕ್ಕೆ ತಳ್ಳುತ್ತಿದ್ದರು ಎಂದು ಕಿಡಿಕಾರಿದರು.
ಅನ್ನಭಾಗ್ಯ ಯೋಜನೆ ಹೆಸರಿನಲ್ಲಿ 7 ಕೆಜಿ ಕೊಟ್ಟಿ, ನಂತರ ಸುಮಾರು ಒಂದು ವರ್ಷಗಳ ಕಾಲ ಕೇವಲ 4 ಕೆಜಿ ಅಕ್ಕಿಯನ್ನು ನೀಡಿದರು. ಅಕ್ಕಿ ಕೊಟ್ಟಿದ್ದು ಕೇಂದ್ರ ಸರ್ಕಾರವೇ ಹೊರತು ನಿಮ್ಮ ಕಾಂಗ್ರೆಸ್ ಸರ್ಕಾರವಲ್ಲ ಎಂದು ಗುಡುಗಿದರು.