Monday, July 28, 2025

ಸತ್ಯ | ನ್ಯಾಯ |ಧರ್ಮ

BJP: ಬಿಜೆಪಿ ಮೊದಲ ಪಟ್ಟಿಯಲ್ಲಿ ಕಂಗನಾ ರಣಾವತ್, ಅಕ್ಷಯ್ ಕುಮಾರ್..?

ಲೋಕಸಭೆ ಚುನಾವಣೆ 2024 ಸಮೀಪಿಸುತ್ತಿದ್ದಂತೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಸಜ್ಜಾಗಿದೆ.

ಚುನಾವಣಾ ವೇಳಾಪಟ್ಟಿಗೂ ಮುನ್ನ ಮೊದಲ ಪಟ್ಟಿಯನ್ನು ಪ್ರಕಟಿಸಲಾಗುವುದು. ಈ ಪಟ್ಟಿಯಲ್ಲಿ ಹೊಸಬರು ಹಾಗೂ ಯುವ ನಾಯಕರಿಗೆ ಸ್ಥಾನ ಸಿಗುವ ಸಾಧ್ಯತೆ ಇದೆ ಎಂಬ ಊಹಾಪೋಹಗಳು ಕೇಳಿಬರುತ್ತಿವೆ. ಬಾಲಿವುಡ್ ಖ್ಯಾತ ನಟರಾದ ಕಂಗನಾ ರಣಾವತ್ ಮತ್ತು ಅಕ್ಷಯ್ ಕುಮಾರ್ ಕೂಡಾ ಕಣಕ್ಕಿಳಿಯಲಿದ್ದಾರೆನ್ನುವ ಸುದ್ದಿಯೂ ಓಡಾಡುತ್ತಿದೆ.

ಇವರಿಬ್ಬರ ಹೆಸರು ಮೊದಲ ಪಟ್ಟಿಯಲ್ಲಿರಬಹುದು ಎಂದು ಹಲವು ಆಂಗ್ಲ ಮಾಧ್ಯಮದ ಲೇಖನಗಳು ಬಹಿರಂಗಪಡಿಸಿವೆ. ದೆಹಲಿಯ ಚಾಂದಿನಿ ಚೌಕ್‌ನಿಂದ ಅಕ್ಷಯ್ ಕುಮಾರ್ ಮತ್ತು ಹಿಮಾಚಲ ಪ್ರದೇಶದ ಮಂಡಿಯಿಂದ ಕಂಗನಾ ಸ್ಪರ್ಧಿಸಲಿದ್ದಾರೆ ಎಂದು ವರದಿಯಾಗಿದೆ. ಇದಕ್ಕೆ ಪುಷ್ಟಿ ಕೊಡುವಂತೆ ರಾಜಕೀಯಕ್ಕೆ ಬರಲು ಇದೇ ಸರಿಯಾದ ಸಮಯ ಎಂದು ಕಂಗನಾ ಇತ್ತೀಚೆಗಷ್ಟೇ ಇಂಟರೆಸ್ಟಿಂಗ್ ಕಾಮೆಂಟ್ಸ್ ಮಾಡಿದ್ದರು. ಈ ಹಿಂದೆ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರು ಬಿಜೆಪಿ ಸೇರಿದರೆ ಸ್ವಾಗತಿಸುವುದಾಗಿ ಹೇಳಿದ್ದರು. ಅಕ್ಷಯ್ ಕುಮಾರ್ ಅವರು ವಿವಿಧ ಸಂದರ್ಭಗಳಲ್ಲಿ ಬಿಜೆಪಿ ಸರ್ಕಾರದ ಪರವಾಗಿ ಮಾತನಾಡಿದ್ದರು.

ಬಿಜೆಪಿಯ ಮೊದಲ ಪಟ್ಟಿಯಲ್ಲಿ 110 ಹೆಸರುಗಳು

ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಇತ್ತೀಚೆಗೆ ಮಹತ್ವದ ಸಭೆ ನಡೆಸಿದೆ. ಸದ್ಯದಲ್ಲೇ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಗಳಿವೆ. ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ 110 ಕ್ಕೂ ಹೆಚ್ಚು ಹೆಸರುಗಳನ್ನು ಘೋಷಿಸಲಾಗುವುದು ಎಂದು ವರದಿಯಾಗಿದೆ. ಹಲವೆಡೆ ಹಾಲಿ ಸಂಸದರಿಗೆ ಮತ್ತೆ ಟಿಕೆಟ್ ಸಿಗಲಿದೆ ಎಂಬ ಸುದ್ದಿ ಕೇಳಿಬರುತ್ತಿರುವಾಗಲೇ ಹೊಸ ಮುಖಗಳಿಗೂ ಅವಕಾಶ ಸಿಗಲಿದೆ ಎನ್ನಲಾಗುತ್ತಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page