ದರ್ಶನ್, ಪವಿತ್ರಾ ಗೌಡ ಸೇರಿದಂತೆ ಒಟ್ಟು ಹದಿನೇಳು ಮಂದಿಯ ಜಾಮೀನು ರದ್ದು ಮಾಡಿ ಬಂಧಿಸುವಂತೆ ಇಂದು ಬೆಳಗ್ಗೆಯೇ ಸುಪ್ರೀಂಕೋರ್ಟ್ ಆದೇಶ ನೀಡಿದ ಹಿನ್ನೆಲೆಯಲ್ಲಿ ಪವಿತ್ರಾ ಗೌಡ, ಉಳಿದ ಮೂರು ಮಂದಿಯನ್ನು ಬಂಧಿಸಲಾಗಿತ್ತು. ಇದೀಗ ಬಂದ ಮಾಹಿತಿಯಂತೆ ನಟ ದರ್ಶನ್‌ರನ್ನೂ ಪೊಲೀಸರು ಬಂಧಿಸಿದ್ದಾರೆ.
ಸುಪ್ರೀಂಕೋರ್ಟ್ ತೀರ್ಪಿನ ಬೆನ್ನಲ್ಲೇ ಪೊಲೀಸರು ನಟ ದರ್ಶನ್‌ರನ್ನು ಹುಡುಕಿದಾಗ ಪತ್ನಿ ವಿಜಯಲಕ್ಷ್ಮಿ ಅವರಿಗೆ ಸೇರಿದ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್‌ನಲ್ಲಿ ದರ್ಶನ್ ಅವರನ್ನು ಬಂಧಿಸಲಾಗಿದೆ. ಪೊಲೀಸರು ದರ್ಶನ್ ಅವರಿಗಾಗಿ ಹೊಸಕೆರೆಹಳ್ಳಿಯ ಸಮೀಪದಲ್ಲಿರುವ ಪತ್ನಿ ವಿಜಯಲಕ್ಷ್ಮಿಯವರ ಪ್ರೆಸ್ಟೀಜ್ ಸೌತ್ ರಿಡ್ಜ್ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್‌ನಲ್ಲಿ ಬಂಧಿಸಲಾಗಿದೆ.
ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ ಎರಡನೇ ಬಾರಿ ದರ್ಶನ್ ಬಂಧನವಾಗಿದೆ.
ಸಧ್ಯ ಎಲ್ಲಾ ವೈದ್ಯಕೀಯ ಪರೀಕ್ಷೆ ನಡೆಸಿ ನ್ಯಾಯಾಧೀಶರ ಮುಂದೆ ದರ್ಶನ್ ಮತ್ತು ತಂಡದವರನ್ನು ಹಾಜರು ಪಡಿಸಲಾಗುತ್ತೆ. ಬಳಿಕ ಅವರನ್ನು ಜೈಲಿಗೆ ಕಳುಹಿಸಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.