Tuesday, January 27, 2026

ಸತ್ಯ | ನ್ಯಾಯ |ಧರ್ಮ

ಬೆಂಗಳೂರಿನಲ್ಲಿ ಮಳೆಯ ತೀವ್ರತೆಗೆ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ರಜೆ ಘೋಷಣೆ ; ಮಳೆ ಹೆಚ್ಚಾಗುವ ಮುನ್ಸೂಚನೆ

ತಮಿಳುನಾಡು ಮತ್ತು ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಗಗಳಲ್ಲಿ ಮಳೆ ತೀವ್ರವಾಗಿ ಮುಂದುವರೆದಿದ್ದು ಹಲವು ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲೂ ಮಳೆ ತೀವ್ರವಾಗಿರುವ ಹಿನ್ನೆಲೆಯಲ್ಲಿ ನಾಳೆ ಎಲ್ಲಾ ಶಾಲೆಗಳಿಗೂ ಬೆಂಗಳೂರು ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.

ಡಿಸಿ ಆದೇಶದಂತೆ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಆದರೆ, ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಹಲವು ಮಾಧ್ಯಮ ವರದಿಗಳು ಮತ್ತು ಭಾರತೀಯ ಹವಾಮಾನ ಇಲಾಖೆಯು ನಗರಕ್ಕೆ ಮಳೆ ಎಚ್ಚರಿಕೆಯನ್ನು ನೀಡಿದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಭಾರತೀಯ ಹವಾಮಾನ ಇಲಾಖೆಯು ಬೆಂಗಳೂರಿಗೆ ಒಂದು ವಾರದಲ್ಲಿ ಮಳೆ ಮುಂದುವರೆಯುವ ಮುನ್ಸೂಚನೆ ನೀಡಿದೆ. ಮೋಡ ಕವಿದ ವಾತಾವರಣ ಮತ್ತು ಮುಂದಿನ 2-3 ದಿನಗಳವರೆಗೆ ಮಳೆ ಮುಂದುವರಿಯುವ ನಿರೀಕ್ಷೆಯಿದೆ.

ಭಾರತೀಯ ಹವಾಮಾನ ಇಲಾಖೆಯ 7 ದಿನಗಳ ಮುನ್ಸೂಚನೆಯಂತೆ ಅಕ್ಟೋಬರ್ 14 ಮತ್ತು 17 ರ ನಡುವೆ ಬೆಂಗಳೂರಿನಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಲಿದೆ ಎಂದು ವರದಿಗಳು ತಿಳಿಸಿವೆ. ಬೆಂಗಳೂರು ಜೊತೆಗೆ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಮಂಗಳವಾರ ಬೆಳಗ್ಗೆ ಸುರಿದ ಮಳೆಯಿಂದಾಗಿ ಬೆಂಗಳೂರು ನಗರದಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಬೆಂಗಳೂರು ಸಂಚಾರ ಪೊಲೀಸರು ಹೊರ ವರ್ತುಲ ರಸ್ತೆ, ಹಳೆ ಮದ್ರಾಸ್ ರಸ್ತೆ, ಹೂಡಿ ಜಂಕ್ಷನ್, ಎಂಎಸ್ ಪಾಳ್ಯ ಡಿಪೋ ರಸ್ತೆ, ಹೆಣ್ಣೂರು-ಬಾಗಲೂರು ಮುಖ್ಯರಸ್ತೆ, ಸುಲ್ತಾನಪೇಟೆ ಜಂಕ್ಷನ್ ಮತ್ತು ವಿಬ್‌ಗ್ಯಾರ್ ಸ್ಕೂಲ್ ರಸ್ತೆ ಸೇರಿದಂತೆ ಹಲವು ಪ್ರದೇಶಗಳಲ್ಲಿ ಜಲಾವೃತಗೊಂಡಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page