Tuesday, November 5, 2024

ಸತ್ಯ | ನ್ಯಾಯ |ಧರ್ಮ

ಸುಳ್ಳು ಬೆದರಿಕೆ ಆರೋಪ: ಕುಮಾರಸ್ವಾಮಿ, ನಿಖಿಲ್ ವಿರುದ್ದ ಎಫ್‌ಐಆರ್ ದಾಖಲು

ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್‌ಗೆ ಬೆದರಿಕೆ ಆರೋಪದ ಹಿನ್ನೆಲೆ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಮತ್ತು ಅವರ ಪುತ್ರ ಚನ್ನಪಟ್ಟಣ NDA ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ವಿರುದ್ಧ ಎಫ್ಐಆರ್‌ ದಾಖಲಾಗಿದೆ.

ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಅವರು ತಮಗೆ ಬೆದರಿಕೆ ಹಾಕಿದ್ದಾರೆಂದು ಸುಳ್ಳು ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಹೆಚ್‌.ಡಿ.ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಅವರ ಅಪ್ತ ಸುರೇಶ್ ಬಾಬು ಮೇಲೆ ದೂರು ದಾಖಲಾಗಿತ್ತು. ಈ ಬಗ್ಗೆ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಕುಮಾರಸ್ವಾಮಿ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣದ ತನಿಖೆ ವಿಚಾರಣೆ ನಂತರ ಪತ್ರಿಕಾಗೋಷ್ಠಿ ನಡೆಸಿ ಎಡಿಜಿಪಿ ವಿರುದ್ದ ಸುಳ್ಳು ಆರೋಪ ಮಾಡಿರುವುದಾಗಿ ದೂರು ನೀಡಲಾಗಿತ್ತು. ಎಸ್‌ಐಟಿಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಹೆಚ್ಚಿನ ಸಾಕ್ಷ್ಯಾಧಾರ ಕಲೆ ಹಾಕಲಾಗುತ್ತಿದೆ. ಸಾಕ್ಷ್ಯಾಧಾರ ಇರುವ ಹಿನ್ನೆಲೆ ರಾಜ್ಯಾಪಾಲರ ಅನುಮತಿ ಕೋರಿ ಪತ್ರ ಬರೆಯಲಾಗಿತ್ತು.

ಇದೇ ವಿಚಾರವಾಗಿ ಸುಳ್ಳು ಆರೋಪ ಮಾಡಿ ಬೆದರಿಕೆ ಹಾಕಿರುವುದಾಗಿ ದೂರು ನೀಡಲಾಗಿತ್ತು. ದೂರಿನ ಹಿನ್ನೆಲೆ ಹೆಚ್‌ಡಿಕೆ, ನಿಖಿಲ್ ಹಾಗೂ ಆಪ್ತ ಸುರೇಶ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಹಿಂದೆ ಪೊಲೀಸರು ಎನ್‌ಸಿಆರ್ ದಾಖಲಿಸಿದ್ದರು. ಹೀಗಾಗಿ ಎಡಿಜಿಪಿ ಚಂದ್ರಶೇಖರ್ ಕೋರ್ಟ್‌ನ ಮೊರೆ ಹೋಗಿದ್ದರು. ಕೋರ್ಟ್ ಸೂಚನೆಯ ಮೇರೆಗೆ ಎಫ್‌ಐಆರ್ ದಾಖಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page