Friday, April 26, 2024

ಸತ್ಯ | ನ್ಯಾಯ |ಧರ್ಮ

ಹಾವು ಹಿಡಿದು ಪ್ರದರ್ಶನ: ಜಗ್ಗಿ ವಾಸುದೇವ್‌ ವಿರುದ್ಧ ದೂರು ದಾಖಲು

ಚಿಕ್ಕಬಳ್ಳಾಪುರ: ಅಕ್ರಮವಾಗಿ ಹಾವು ಹಿಡಿದು, ಸಾರ್ವಜನಿಕವಾಗಿ ಪ್ರದರ್ಶನ ಮಾಡಿದ ಆರೋಪದ ಮೇಲೆ ಇಶಾ ಫೌಂಡೇಶನ್‌ ಸಂಸ್ಥಾಪಕ, ಸದ್ಗುರು ಎಂದೇ ಖ್ಯಾತರಾಗಿರುವ ಜಗ್ಗಿ ವಾಸುದೇವ್‌ ಅವರ ವಿರುದ್ಧ ದೂರು ದಾಖಲಾಗಿದೆ.

ಚಿಕ್ಕಬಳ್ಳಾಪುರ ತಾಲ್ಲೂಕಿನ ಜಾಲಾರಿ ನರಸಿಂಹಸ್ವಾಮಿ ಬೆಟ್ಟದ ತಪ್ಪಲಿನ ಇಶಾ ಆದಿಯೋಗಿ ಧ್ಯಾನ ಕೇಂದ್ರದಲ್ಲಿ ನಡೆದ ಇತ್ತೀಚಿಗೆ ನಡೆದ ನಾಗಮಂಟಪ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಜಗ್ಗಿ ವಾಸುದೇವ್‌ ಅವರು ಜೀವಂತ ಹಾವನ್ನು ಹಿಡಿದು ಸಾರ್ವಜನಿಕವಾಗಿ ಪ್ರದರ್ಶನ ಮಾಡಿ ಹಿಂಸೆ ಮಾಡಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆಯನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಚಿಕ್ಕಬಳ್ಳಾಪುರದ ಉರಗತಜ್ಞ ಸಿಎನ್‌ ಪೃಥ್ವಿರಾಜ್‌ ಅವರು ಚಿಕ್ಕಬಳ್ಳಾಪುರ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.

ಮೂಲಗಳ ಪ್ರಕಾರ ದೂರಿನಲ್ಲಿ ಹಾವಿನ ಅಕ್ರಮ ಸಾಗಣೆ ಮಾಡಿ ಸಾರ್ವಜನಿಕವಾಗಿ ಪ್ರದರ್ಶಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ ಎಂದು ತಿಳಿದು ಬಂದಿದೆ.

Related Articles

ಇತ್ತೀಚಿನ ಸುದ್ದಿಗಳು