Home ಅಪರಾಧ ವಲಸೆ ಕಾರ್ಮಿಕರಿಗೆ ಬೆದರಿಕೆ ಆರೋಪ: ಪುನೀತ್ ಕೆರೆಹಳ್ಳಿ ಪೊಲೀಸ್ ವಶಕ್ಕೆ

ವಲಸೆ ಕಾರ್ಮಿಕರಿಗೆ ಬೆದರಿಕೆ ಆರೋಪ: ಪುನೀತ್ ಕೆರೆಹಳ್ಳಿ ಪೊಲೀಸ್ ವಶಕ್ಕೆ

0

ಬೆಂಗಳೂರು: ವಲಸೆ ಕಾರ್ಮಿಕರ ವಾಸಸ್ಥಳಗಳಿಗೆ ಅಕ್ರಮವಾಗಿ ಪ್ರವೇಶಿಸಿ, ಅವರ ಪೌರತ್ವ ಹಾಗೂ ಗುರುತಿನ ದಾಖಲೆಗಳನ್ನು ಕೇಳಿ, ಬೆದರಿಕೆ ಹಾಗೂ ಭೀತಿಯನ್ನುಂಟುಮಾಡಿದ ಗಂಭೀರ ಆರೋಪದ ಮೇಲೆ ಕೊಲೆ ಪ್ರಕರಣದ ಆರೋಪಿ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪುನೀತ್ ಕೆರೆಹಳ್ಳಿ ಹಾಗೂ ಆತನ ಸಹಚರರ ವಿರುದ್ಧ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ‘ದ್ವೇಷದ ಮಾತಿನ ವಿರುದ್ಧ ಜನಾಂದೋಲನ / Campaign Against Hate Speech’ ಸಂಘಟನೆಯು ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಇ-ಮೇಲ್ ಮೂಲಕ ಮನವಿ ಸಲ್ಲಿಸಿತ್ತು.

ದೂರುದಾರರ ಪ್ರಕಾರ, ಪುನೀತ್ ಕೆರೆಹಳ್ಳಿ ಸ್ವತಃ ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡಿದ ವೀಡಿಯೊಗಳಲ್ಲಿ ಮುಸ್ಲಿಂ ವಲಸೆ ಕಾರ್ಮಿಕರನ್ನು “ಬಾಂಗ್ಲಾದೇಶಿಗಳು” ಎಂದು ಗುರುತಿಸಿ, ರಾತ್ರಿ ಸಮಯದಲ್ಲಿ ಘೋಷಣೆ ಕೂಗುತ್ತಿರುವುದು ದಾಖಲಾಗಿದೆ. ಈ ಮೂಲಕ ಧರ್ಮಾಧಾರಿತ ದ್ವೇಷವನ್ನು ಪ್ರಚೋದಿಸಿ ಸಮಾಜದಲ್ಲಿ ಉದ್ವಿಗ್ನತೆ ಉಂಟುಮಾಡುವ ಪ್ರಯತ್ನ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

ಈ ರೀತಿಯ ಕೃತ್ಯಗಳಿಂದ ವಲಸೆ ಕಾರ್ಮಿಕರ ಗೌರವ, ಗೌಪ್ಯತೆ ಹಾಗೂ ಜೀವಸುರಕ್ಷೆಗೆ ಗಂಭೀರ ಅಪಾಯ ಉಂಟಾಗಿದ್ದು, ಸಾರ್ವಜನಿಕ ಶಾಂತಿ ಭಂಗವಾಗುವ ಸಾಧ್ಯತೆ ಇದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ವಶಕ್ಕೆ ಪಡೆದು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

You cannot copy content of this page

Exit mobile version