Saturday, January 10, 2026

ಸತ್ಯ | ನ್ಯಾಯ |ಧರ್ಮ

ಅಲೋಪತಿ ಆಸ್ಪತ್ರೆಗೆ ನೀಲಿ ಮತ್ತು ಆಯುರ್ವೇದಿಕ್ ಆಸ್ಪತ್ರೆಗೆ ಹಸಿರು ಬಣ್ಣದ ಬೋರ್ಡ್: ಸರ್ಕಾರದಿಂದ ಹೊಸ ನಿಯಮ

ನಕಲಿ ವೈದ್ಯಕೀಯ ವೃತ್ತಿಯನ್ನು ಬೇರುಸಮೇತ ಕಿತ್ತೊಗೆಯಲು ಆರೋಗ್ಯ ಇಲಾಖೆಯು ಹೊಸದೊಂದು ಆದೇಶವನ್ನು ಹೊರಡಿಸಿದೆ.

ಇದರನ್ವಯ ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್’ಗಳು ತಮ್ಮ KPME ನೋಂದಣಿ ಸಂಖ್ಯೆ, ಆಸ್ಪತ್ರೆಯ ಹೆಸರು ಮತ್ತು ಮಾಲೀಕರ ಹೆಸರನ್ನು ಕಟ್ಟಡದ ಮುಂಭಾಗದಲ್ಲಿ ಪ್ರದರ್ಶಿಸವುದು ಕಡ್ಡಾಯವೆಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

ಇಷ್ಟೇ ಅಲ್ಲದೆ, ಅಲೋಪತಿ ಆಸ್ಪತ್ರೆಗಳು ನೀಲಿ ಬಣ್ಣ ಮತ್ತು ಆಯುರ್ವೇದಿಕ್ ಆಸ್ಪತ್ರೆಗಳು ಹಸಿರು ಬಣ್ಣದ ಬೋರ್ಡ್ ಬಳಸುವ ಮೂಲಕ ಬಣ್ಣ ಸಂಹಿತೆಯನ್ನು ಕಡ್ಡಾಯವಾಗಿ ಅನುಸರಿಸಬೇಕು.

ಖಾಸಗಿ ವೈದ್ಯಕೀಯ ಆಸ್ಪತ್ರೆಗಳು ಈ ನಿಯಮಗಳನ್ನು ಅನುಸರಿಸುವಲ್ಲಿ ವಿಫಲವಾದಲ್ಲಿ KPME ತಿದ್ದುಪಡಿ ಕಾಯಿದೆ 2017 ರ ಸೆಕ್ಷನ್ 19(5) ರ ಅನ್ವಯ ಕಠಿಣ ಕಾನೂನುಕ್ರಮ ಕೈಗೊಳ್ಳಲಾಗುವುದು ಆರೋಗ್ಯ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page