ತೆಲಂಗಾಣದಲ್ಲಿ ಪುಷ್ಪ 2 ಸಿನೆಮಾ ಪ್ರಿಮಿಯರ್ ಶೋ ವೇಳೆ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ವಿಚಾರಣೆಗೆ ನಟ ಅಲ್ಲು ಅರ್ಜುನ್ ಹಾಜರಾಗಿದ್ದಾರೆ.
ಪುಷ್ಪ-2 ಪ್ರೀಮಿಯರ್ ಶೋ ವೇಳೆ ಕಾಲ್ತುಳಿತದಲ್ಲಿ ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪೊಲೀಸ್ ವಿಚಾರಣೆಗೆ ಅಲ್ಲು ಅರ್ಜುನ್ ಹಾಜರಾಗಿದ್ದಾರೆ. ವಕೀಲರ ಜೊತೆ ಚಿಕ್ಕಡಪಲ್ಲಿ ಪೊಲೀಸ್ ಠಾಣೆಗೆ ಬಂದ ನಟ ಅಲ್ಲು ಅರ್ಜುನ್ ಹೇಳಿಕೆಯನ್ನು ದಾಖಲಿಸಿದ್ದಾರೆ.
ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದರು. ಪೊಲೀಸರು ಇಂದು ಅವರ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಳ್ಳಲಿದ್ದಾರೆ.
ಡಿಸೆಂಬರ್ 4 ರಂದು ಹೈದರಾಬಾದ್ ನ ಸಂಧ್ಯಾ ಥಿಯೇಟರ್ ನಲ್ಲಿ ‘ಪುಷ್ಪ 2’ ಚಿತ್ರ ಪ್ರದರ್ಶನದ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ರೇವತಿ ಮೃತಪಟ್ಟಿದ್ದರು. 8 ವರ್ಷದ ಪುತ್ರ ಪ್ರಸ್ತುತ ನಗರದ ಖಾಸಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.