ಆಳ್ವಾಸ್‌ ಕಾಲೇಜಿನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ದಕ್ಷಿಣ ಕನ್ನಡ: ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಮೃತಪಟ್ಟಿರುವ ಘಟನೆ ಮೂಡಿಬಿದಿರೆಯ ಆಳ್ವಾಸ್‌ ಕಾಲೇಜಿನ ಹಾಸ್ಟೆಲ್‌ನಲ್ಲಿ ಸೋಮವಾರ ಸಂಜೆ ನಡೆದಿದೆ.

ಮೈಸೂರು ಮೂಲದ ಮೇಘನಾ ಎಂಬ ವಿದ್ಯಾರ್ಥಿನಿಯೊಬ್ಬಳು ಮೂಡುಬಿದಿರೆಯ ಆಳ್ವಾಸ್‌ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವ್ಯಾಸಾಂಗ ಮಾಡುತ್ತಿದ್ದಳು. ಆದರೆ ನೆನ್ನೆ ಸಂಜೆ ಕಾಲೇಜಿನ ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಘಟನೆ ತಿಳಿದು ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಮೇಘನಾ ಇತ್ತೀಚೆಗೆ ಕೌಟುಂಬಿಕ ಸಮಸ್ಯೆಯಿಂದ ಹೆಚ್ಚು ತಲೆಕೆಡಿಸಿಕೊಂಡಿದ್ದಳು  ಎಂಬ ಮಾಹಿತಿ ತಿಳಿದು ಬಂದಿದೆ.

Related Articles

ಇತ್ತೀಚಿನ ಸುದ್ದಿಗಳು