Monday, June 17, 2024

ಸತ್ಯ | ನ್ಯಾಯ |ಧರ್ಮ

ಬಿಜೆಪಿ ಸೋತಲ್ಲಿ ಇಂಡಿಯಾ ಒಕ್ಕೂಟಕ್ಕೆ ನಾವು ಹೊರಗಿನಿಂದ ಬೆಂಬಲ ನೀಡುತ್ತೇವೆ: ಮಮತಾ ಬ್ಯಾನರ್ಜಿ

ಸೀಟು ಹೊಂದಾಣಿಕೆ ವಿಷಯದಲ್ಲಿ ಸಹಮತಕ್ಕೆ ಬರಲು ಸಾಧ್ಯವಾಗದ ಕಾರಣ ಇಂಡಿಯಾ ಮೈತ್ರಿಕೂಟದಿಂದ ಹೊರಗುಳಿದಿದ್ದ ತೃಣಮೂಲ ಕಾಂಗ್ರೆಸ್‌ ಒಂದು ವೇಳೆ ಇಂಡಿಯಾ ಮೈತ್ರಿ ಕೂಟ ಬಹುಮತಕ್ಕೆ ಹತ್ತಿರವಾದಲ್ಲಿ ತಾನು ಹೊರಗಿನಿಂದ ಬೆಂಬಲ ಕೊಟ್ಟು ಸರ್ಕಾರ ರಚಿಸಲು ಸಹಾಯ ಮಾಡುವುದಾಗಿ ಹೇಳಿದೆ.

ಈ ಕುರಿತು ಹೇಳಿಕೆ ತೃಣಮೂಲ ಕಾಂಗ್ರೆಸ್‌ನ ಮುಖ್ಯಸ್ಥೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಜೆಪಿ ಸೋತರೆ ವಿರೋಧ ಪಕ್ಷಕ್ಕೆ ಹೊರಗಿನ ಬೆಂಬಲ ನೀಡುವುದಾಗಿ ಬ್ಯಾನರ್ಜಿ ಹೇಳಿದ್ದಾರೆ.

ಮಾಧ್ಯಮ ವರದಿಗಳ ಪ್ರಕಾರ, ವಿರೋಧ ಪಕ್ಷಗಳು ಅಧಿಕಾರಕ್ಕೆ ಬಂದರೆ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಪರಿಗಣಿಸಬಹುದು ಎಂಬ ಊಹೆಯ ನಡುವೆ ಮಮತಾ ಬ್ಯಾನರ್ಜಿ ಅವರ ಈ ಹೇಳಿಕೆ ಬಂದಿದೆ.

ಮೊದಲ ನಾಲ್ಕು ಹಂತದ ಚುನಾವಣೆಯಲ್ಲಿ ಬಿಜೆಪಿ ಸೋಲಲಿದೆ, ಉಳಿದ ಮೂರರಲ್ಲಿ ಗೆಲ್ಲುವ ಸಾಧ್ಯತೆ ಇಲ್ಲ, ಅವರು ಭಾರಿ ಸದ್ದು ಮಾಡ್ತಾರೆ, ಆದರೆ ಗೆಲ್ಲಲು ಸಾಧ್ಯವಿಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ನಾನು ದೆಹಲಿಯ ಬಗ್ಗೆ ದೊಡ್ಡ ಲೆಕ್ಕಾಚಾರಗಳನ್ನು ಮಾಡುತ್ತಿದ್ದೇನೆ, ನಾವು ಇಂಡಿಯಾ ಮೈತ್ರಿಕೂಟಕ್ಕೆ ನಾಯಕತ್ವವನ್ನು ನೀಡುತ್ತೇವೆ ಮತ್ತು ಹೊರಗಿನಿಂದ ಅವರಿಗೆ ಎಲ್ಲಾ ರೀತಿಯಲ್ಲಿ ಸಹಾಯ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ.

ಬಿಜೆಪಿ ಸರ್ಕಾರ ಅಧಿಕಾರದಿಂದ ಹೊರಗುಳಿದ ನಂತರ ಸಿಎಎ, ಎನ್‌ಆರ್‌ಸಿ ಮತ್ತು ಯುಸಿಸಿಯನ್ನು ರದ್ದುಗೊಳಿಸುವುದಾಗಿ ಅವರು ಪ್ರತಿಜ್ಞೆ ಮಾಡಿದರು.

ಲೋಕಸಭೆ ಚುನಾವಣೆಯಲ್ಲಿ 400 ಸ್ಥಾನಗಳನ್ನು ಗಳಿಸುವ ಬಿಜೆಪಿಯ ಮಹತ್ವಾಕಾಂಕ್ಷೆಯ ಗುರಿಯ ಬಗ್ಗೆ ಸಂಶಯ ವ್ಯಕ್ತಪಡಿಸಿದ ಅವರು, ಜನರು ಅವರನ್ನು ಸಂಪೂರ್ಣವಾಗಿ ತಿರಸ್ಕರಿಸುತ್ತಾರೆ ಎಂದು ಹೇಳಿದರು.

”ಬಿಜೆಪಿ 400 ಸೀಟು ಗೆಲ್ಲುತ್ತೇವೆ ಎಂದು ಹೇಳುತ್ತಿದೆ, ಆದರೆ ಅದು ನಡೆಯುವುದಿಲ್ಲ ಎಂದು ಜನರು ಹೇಳುತ್ತಿದ್ದಾರೆ. ಕೇಂದ್ರದಲ್ಲಿ ಸರ್ಕಾರ ರಚಿಸಲು ನಾವು (ಟಿಎಂಸಿ) ಹೊರಗಿನಿಂದ ಇಂಡಿಯಾ ಬಣವನ್ನು ಬೆಂಬಲಿಸುತ್ತೇವೆ. (ಪಶ್ಚಿಮ) ಬಂಗಾಳದಲ್ಲಿ, ನಮ್ಮ ತಾಯಂದಿರು ಮತ್ತು ಸಹೋದರಿಯರು ಎಂದಿಗೂ ಸಮಸ್ಯೆಯನ್ನು ಎದುರಿಸದಂತೆ ನಾವು ನಮ್ಮ ಬೆಂಬಲವನ್ನು ನೀಡುತ್ತೇವೆ … ಮತ್ತು ನರೇಗಾ ಉದ್ಯೋಗ ಯೋಜನೆಯಲ್ಲಿ ಕೆಲಸ ಮಾಡುವವರು ಸಹ ಸಮಸ್ಯೆಗಳನ್ನು ಎದುರಿಸುವುದಿಲ್ಲ” ಎಂದು ಬ್ಯಾನರ್ಜಿ ಹೇಳಿದರು.

ಮಮತಾ ಬ್ಯಾನರ್ಜಿ ಹೂಗ್ಲಿ ಜಿಲ್ಲೆಯ ಚಿನ್ಸುರಾದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು.

Related Articles

ಇತ್ತೀಚಿನ ಸುದ್ದಿಗಳು