ನವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬಕ್ಕೆ ಬೆದರಿಕೆ ಹಾಕುವ ಕರೆಗಳನ್ನು ಸ್ವೀಕರಿಸಿದ ಬಗ್ಗೆ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆ ದೂರು ದಾಖಲಿಸಿದೆ.
ಆಸ್ಪತ್ರೆಯಲ್ಲಿ ಮೂರಕ್ಕೂ ಹೆಚ್ಚು ಕರೆಗಳು ಬಂದಿವೆ. ಈ ಕುರಿತು ಪ್ರಕರಣ ದಾಖಲಾಗಿದೆ. ಕರೆ ಎಲ್ಲಿಂದ ಬಂದಿದೆ ಎಂಬುದನ್ನು ಪತ್ತೆ ಮಾಡಲು ಡಿಬಿ ಮಾರ್ಗ್ ಪೊಲೀಸರು ತನಿಖೆ ನಡೆಸಿದ್ದು, ತನಿಖೆ ನಂತರ ಬೆದರಿಕೆ ಕರೆಗಳಿಗೆ ನಂಟು ಹೊಂದಿರುವ ಅನುಮಾನದಲ್ಲಿ ಮುಂಬಯಿಯ ಪಶ್ಚಿಮ ಉಪನಗರದಲ್ಲಿ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
ಬಂಧಿತನನ್ನು ಅಫ್ಜಲ್ ಎಂದು ಗುರುತಿಸಲಾಗಿದ್ದು, ಕರೆ ಬಂದಿದ್ದ ಫೋನ್ ಸಂಖ್ಯೆಯನ್ನು ಪತ್ತೆ ಮಾಡಿ ಅದರ ಆಧಾರದಲ್ಲಿ ಆತನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.