ಡಿಸೆಂಬರ್ 28 ರಂದು ಆಡಳಿತಾರೂಢ ವೈಎಸ್‌ಆರ್‌ಸಿಪಿಗೆ ಸೇರ್ಪಡೆಗೊಂಡಿದ್ದ ಮಾಜಿ ಕ್ರಿಕೆಟಿಗ ಅಂಬಟಿ ರಾಯ್ಡು ಅವರು ಪಕ್ಷವನ್ನು ತ್ಯಜಿಸುವುದಾಗಿ ಘೋಷಿಸಿದ್ದಾರೆ. ರಾಜಕೀ ಸೇರಿದ ಕೇವಲ ಒಂದು ವಾರದಲ್ಲೇ ರಾಯುಡು ರಿಟೈರ್ಡ್ ಹರ್ಟ್ ಆಗಿ ಪೆವಿಲಿಯನ್ ಸೇರಿದ್ದಾರೆ. ಒಂದಷ್ಟು ದಿನ ವಿರಾಮ ಬೇಕು ಎಂದು ಹೇಳುವ ಮೂಲಕ ರಾಜಕೀಯದಿಂದ ಹಿಂದಕ್ಕೆ ಸರಿದಿದ್ದಾರೆ.
ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಹೇಳಿಕೆಯಲ್ಲಿ, “ನಾನು ವೈಎಸ್‌ಆರ್‌ಸಿಪಿ ಪಕ್ಷವನ್ನು ತೊರೆಯಲು ನಿರ್ಧರಿಸಿದ್ದೇನೆ ಮತ್ತು ಸ್ವಲ್ಪ ಸಮಯದವರೆಗೆ ರಾಜಕೀಯದಿಂದ ದೂರವಿರಲು ನಿರ್ಧರಿಸಿದ್ದೇನೆ ಎಂದು ಎಲ್ಲರಿಗೂ ಈ ಮೂಲಕ ತಿಳಿಸುತ್ತಿದ್ದೇನೆ. ಮುಂದಿನ ಕ್ರಮವನ್ನು ಸರಿಯಾದ ಸಮಯದಲ್ಲಿ ತಿಳಿಸಲಾಗುವುದು.” ಎಂದಿದ್ದಾರೆ.
ರಾಯುಡು ಅವರು ಅಂತರರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಭಾರತೀಯ ಕ್ರಿಕೆಟ್ ತಂಡವನ್ನು ಪ್ರತಿನಿಧಿಸಿದ್ದರು ಮತ್ತು ಹಲವಾರು ರಾಜ್ಯ ಕ್ರಿಕೆಟ್ ಸಂಸ್ಥೆಗಳಿಗೆ ಆಡಿದ್ದಲ್ಲದೆ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಭಾಗವಹಿಸಿದ್ದರು.