Home ಬ್ರೇಕಿಂಗ್ ಸುದ್ದಿ ಹಾಸನ ಮೇ.18 ರಂದು ಅಂಬೇಡ್ಕರ್ ಜಯಂತಿ,ನೌಕರರ ಸ್ವಾಭಿಮಾನ ಸಮಾವೇಶ : ಡಿ. ಶಿವಶಂಕರ್

ಮೇ.18 ರಂದು ಅಂಬೇಡ್ಕರ್ ಜಯಂತಿ,ನೌಕರರ ಸ್ವಾಭಿಮಾನ ಸಮಾವೇಶ : ಡಿ. ಶಿವಶಂಕರ್

ಹಾಸನ : ನಗರದ ಅಂಬೇಡ್ಕರ್ ಭವನದಲ್ಲಿ ಮೇ.18 ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಹಾಗೂ ನೌಕರರ ಸ್ವಾಭಿಮಾನ ಸಮಾವೇಶ ಹಮ್ಮಿಕೊಂಡಿರುವುದಾಗಿ ರಾಜ್ಯ ಸರಕಾರಿ ಎಸ್.ಸಿ, ಎಸ್.ಟಿ. ನೌಕರರ ನ್ವಯ ಸಮಿತಿ ರಾಜ್ಯಾಧ್ಯಕ್ಷ ಡಿ. ಶಿವಶಂಕರ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿ, ಸಮಾವೇಶದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಉದ್ಘಾಟನೆ ನೆರವೇರಿಸಲಿದ್ದಾರೆ. ಇದೆ ವೇಳೆ ಸಂಸದ ಶ್ರೇಯಸ್ ಎಂ. ಪಟೇಲ್, ಸಾಹಿತಿ ನಾಡೋಜ ಬರಗೂರು ರಾಮಚಂದ್ರಪ್ಪ, ಸಮನ್ವಯ ಸಮಿತಿ ಜಿಲ್ಲಾಧ್ಯಕ್ಷ ವೆಂಕಟೇಶ್ ದೇವಾಪುರ, ಹಾಗೂ ಹಾಸನ ಜಿಲ್ಲೆಯ ಶಾಸಕರುಗಳು ಭಾಗವಹಿಸಲಿದ್ದಾರೆ ಎಂದರು. ರಾಜ್ಯದ ಪರಿಶಿಷ್ಟ ಜಾತಿ ಹಾಗೂ ಪಂಗಡದ ಜನರನ್ನು ಒಂದುಗೂಡಿಸುವುದು ಮತ್ತು ಅವರಿಗೆ ಸರಿಯಾದ ರೀತಿಯಲ್ಲಿ ಸೌಲಭ್ಯಗಳನ್ನು ತಲುಪಿಸುವ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ತಿಳಿಸಿದರು. ಹಾಗೂ ಮೇ 18ರಂದು ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲೆಯ ತಳ ಸಮುದಾಯದಲ್ಲಿ ಬೆಳದು ರಾಜ್ಯದ ಹಲವಾರು ಕಾರ್ಯ ನಿರ್ವಹಿಸುತ್ತಿರುವವರನ್ನು ಹಾಗೂ ಎಸ್‌ಎಸ್‌ಎಲ್‌ಎಸಿ ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು ಎಂದು ಹೇಳಿದರು. ಯಾರೆಲ್ಲಾ ಭಾರತಿಯತೆಯನ್ನು ಬಯಸುತ್ತಾರೆ ಹಾಗೂ ಸನಾತನತೆಯನ್ನು ವಿರೋಧಿಸುತ್ತಾರೆ ಅವರೆಲ್ಲರೂ ಹಾಗೂ ಮನುಷ್ಯ ಮನುಷ್ಯನನ್ನು ಪ್ರೀತಿಸುತ್ತಾರೆ ಅವರು ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು, ಮತ್ತು ಸರ್ಕಾರಿ ನೌಕರರು ಕುಟುಂಬ ಸಮೇತರಾಗಿ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು. ಇನ್ನು ಒಳ ಮೀಸಲಾತಿ ಸಮೀಕ್ಷೆ ಮಾಡುತ್ತಿರುವುದು ಉತ್ತಮವಾಗಿದ್ದು, ಆದರೇ ವೈಜ್ನಾನಿಕವಾಗಿ ಸಮೀಕ್ಷೆ ಮಾಡಬೇಕು ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಸರಕಾರಿ ಎಸ್.ಸಿ, ಎಸ್.ಟಿ. ನೌಕರರ ನ್ವಯ ಸಮಿತಿ ಜಿಲ್ಲಾಧ್ಯಕ್ಷ ವೆಂಕಟೇಶ್ ದೇವಿಪುರ, ಹಿರಿಯ ಉಪಾಧ್ಯಕ್ಷ ಬಿ.ಎನ್. ಜಯರಾಂ, ರಂಗಸ್ವಾಮಿ, ಮಹೇಶ್, ಸಿದ್ದಯ್ಯ, ಶಿವಕುಮಾರ್ ಇತರರು ಉಪಸ್ಥಿತರಿದ್ದರು.

You cannot copy content of this page

Exit mobile version