Saturday, April 19, 2025

ಸತ್ಯ | ನ್ಯಾಯ |ಧರ್ಮ

 ಮಲೆ ಮಹದೇಶ್ವರ ಬೆಟ್ಟ (Malemahadeshwara Betta) ಹಾಡಿಗಳಿಗೆ ಆಂಬುಲೆನ್ಸ್‌ ಸೇವೆ ಆರಂಭ

ಹನೂರು: ತಾಲೂಕಿನ ಮಲೆ ಮಹದೇಶ್ವರ ಬೆಟ್ಟ (Malemahadeshwara Betta) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾಡಿಗಳ ಜನರಿಗೆ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಶ್ರೀ ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ವತಿಯಿಂದ ಉಚಿತ ಆಂಬುಲೆನ್ಸ್ ಸೇವೆ ಪ್ರಾರಂಭಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು ತಿಳಿಸಿದರು.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಮಲೆ ಮಾದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 18 ಗ್ರಾಮಗಳಿದ್ದು ಬೆಟ್ಟ ಗುಡ್ಡಗಳಿಂದ ಅರಣ್ಯದ ಮಧ್ಯಭಾಗದಲ್ಲಿ ಇರುವುದರಿಂದ ಸಮರ್ಪಕ ರಸ್ತೆ ಇಲ್ಲದೆ ಇರುವುದರಿಂದ ಸಾರಿಗೆ ವ್ಯವಸ್ಥೆ ಇಲ್ಲದೆ ಇಲ್ಲಿ ನಾನ್ ನಿವಾಸಿಗಳು ತೊಂದರೆ ಅನುಭವಿಸುತ್ತಿರುವುದರ ಬಗ್ಗೆ ಶಾಸಕ ಎಂಆರ್ ಮಂಜುನಾಥ್ ರವರ ಮಾರ್ಗದರ್ಶನದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು, ಜಿಲ್ಲಾ ಉಸ್ತುವಾರಿ ಸಚಿವರು ಪ್ರಾಧಿಕಾರದ ವೆಂಕಟೇಶ್ ರವರ ಗಮನಕ್ಕೆ ತಂದು ಪ್ರಾಧಿಕಾರದ ಅನುಮೋದನೆಯೊಂದಿಗೆ 18.5 ಲಕ್ಷ ವೆಚ್ಚದಲ್ಲಿ ವಿಶೇಷ ವ್ಯವಸ್ಥೆಯುಳ್ಳ ಆಂಬುಲೆನ್ಸ್ ಸೇವೆ ಪ್ರಾರಂಭಿಸಲಾಗಿದೆ ಎಂದರು.

ಶಾಸಕರಿಂದ ಹಸ್ತಾಂತರ: ಶ್ರೀ ಕ್ಷೇತ್ರ ಮಲೆಮಾದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಖರೀದಿಸಿರುವ ವಿಶೇಷ ಆಂಬುಲೆನ್ಸ್ ವಾಹನವನ್ನು ಶಾಸಕ ಎಂಆರ್ ಮಂಜುನಾಥ್, ಜಿಲ್ಲಾಧಿಕಾರಿ ಸಿ ಟಿ ಶಿಲ್ಪನಾಗ್ ರವರ ಸಮ್ಮುಖದಲ್ಲಿ ಆರೋಗ್ಯ ಇಲಾಖೆಗೆ ಹಸ್ತಾಂತರಿಸಲಾಯಿತು.

ಶಾಸಕ ಎಂಆರ್ ಮಂಜುನಾಥ್ ಮಾತನಾಡಿ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಗ್ರಾಮಸ್ಥರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಪ್ರಾಧಿಕಾರದ ವತಿಯಿಂದ ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಕಾಡಂಚಿನ ಗ್ರಾಮಗಳ ನಿವಾಸಿಗಳು ಆರೋಗ್ಯ ಸಮಸ್ಯೆ ಕಂಡು ಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದರೆ ತಕ್ಷಣ ನೀವಿರುವ ಸ್ಥಳಕ್ಕೆ ಬಂದು ಚಿಕಿತ್ಸೆ ಕೊಡಿಸಲು ಕರೆದೊಯ್ಯುತ್ತಾರೆ. ಈ ನಿಟ್ಟಿನಲ್ಲಿ ಕಾಡಂಚಿನ ಗ್ರಾಮಗಳ ನಿವಾಸಿಗಳು ಈ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು.

ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಬಿ ಟಿ ಕವಿತಾ, ಪ್ರಾಧಿಕಾರದ ಸಿಬ್ಬಂದಿ ವರ್ಗದವರು ಹಾಜರಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page