Friday, April 26, 2024

ಸತ್ಯ | ನ್ಯಾಯ |ಧರ್ಮ

ಕೇಜ್ರಿವಾಲ್ ಬಂಧನದ ಬಗ್ಗೆ ಅಮೆರಿಕ ಮತ್ತೆ ಪ್ರತಿಕ್ರಿಯೆ, ಕಾಂಗ್ರೆಸ್ ಖಾತೆಗಳನ್ನು ಸ್ಥಗಿತಗೊಳಿಸಿದ ಕುರಿತಾಗಿಯೂ ಮಾತನಾಡಿದ ದೊಡ್ಡಣ್ಣ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಅಮೆರಿಕ ಮತ್ತೊಮ್ಮೆ ಪ್ರತಿಕ್ರಿಯೆ ನೀಡಿದೆ. ಅಮೇರಿಕನ್ ರಾಜತಾಂತ್ರಿಕರನ್ನು ಕರೆಸಿದ ನಂತರ, ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ವಕ್ತಾರ ಮ್ಯಾಥ್ಯೂ ಮಿಲ್ಲರ್ ಅವರು ಅರವಿಂದ್ ಕೇಜ್ರಿವಾಲ್ ಅವರ ಬಂಧನ ಮತ್ತು ಕಾಂಗ್ರೆಸ್ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವ ಪ್ರಕರಣಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ತಿಳಿಸಿದರು.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನ ಸೇರಿದಂತೆ ದೇಶದ ಬೆಳವಣಿಗೆಗಳನ್ನು ನಾವು ಸೂಕ್ಷ್ಮವಾಗಿ ಗಮನಿಸುವುದನ್ನು ಮುಂದುವರಿಸುತ್ತೇವೆ ಎಂದು ಮಿಲ್ಲರ್ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ ಕೆಲವು ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿರುವುದು ನಮಗೂ ತಿಳಿದಿದೆ ಎಂದು ಮಿಲ್ಲರ್ ಹೇಳಿದ್ದಾರೆ. ನ್ಯಾಯಯುತ, ಪಾರದರ್ಶಕ, ಸಮಯೋಚಿತ ಕಾನೂನು ಪ್ರಕ್ರಿಯೆಯನ್ನು ನಾವು ಪ್ರೋತ್ಸಾಹಿಸುತ್ತೇವೆ ಮತ್ತು ಇದರ ಬಗ್ಗೆ ಯಾರಿಗೂ ಆಕ್ಷೇಪ ಇರಬಾರದು ಎಂದು ನಾವು ಭಾವಿಸುತ್ತೇವೆ ಎಂದು ಹೇಳಿದರು.

ನಮ್ಮ ಆಂತರಿಕ ವಿಚಾರಗಳಲ್ಲಿ ಅಮೆರಿಕ ಹಸ್ತಕ್ಷೇಪ ಮಾಡಬಾರದು

ಇದಕ್ಕೂ ಒಂದು ದಿನ ಮುಂಚೆಯೇ ಅಮೆರಿಕ ಈ ವಿಷಯದ ಬಗ್ಗೆ ತನ್ನ ಹೇಳಿಕೆಯನ್ನು ನೀಡಿತ್ತು. ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ನಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಎಂದು ಹೇಳಿದ್ದರು. ಮುಖ್ಯಮಂತ್ರಿ ಕೇಜ್ರಿವಾಲ್‌ ವಿಷಯದಲ್ಲಿ ಪಾರದರ್ಶಕ ಕಾನೂನು ಪ್ರಕ್ರಿಯೆಯನ್ನು ನಾವು ನಿರೀಕ್ಷಿಸುತ್ತೇವೆ ಎಂದು ಅದು ಹೇಳಿತ್ತು.

ಅಮೆರಿಕದ ಈ ಹೇಳಿಕೆಗೆ ಭಾರತ ತೀವ್ರ ವಿರೋಧ ವ್ಯಕ್ತಪಡಿಸಿದೆ. ಭಾರತ ಬುಧವಾರ ಅಮೆರಿಕದ ರಾಜತಾಂತ್ರಿಕ ಗ್ಲೋರಿಯಾ ಬಾರ್ಬೆನಾ ಅವರನ್ನು ಕರೆಸಿತ್ತು. ಈ ವೇಳೆ ಭಾರತ ನಮ್ಮ ಆಂತರಿಕ ವಿಚಾರದಲ್ಲಿ ಅಮೆರಿಕ ಹಸ್ತಕ್ಷೇಪ ಮಾಡಬಾರದು ಎಂದು ಹೇಳಿದೆ. ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ವಕ್ತಾರರ ಹೇಳಿಕೆಗಳನ್ನು ನಾವು ಬಲವಾಗಿ ಆಕ್ಷೇಪಿಸುತ್ತೇವೆ ಭಾರತ ಹೇಳಿದೆ.

ಕೇಜ್ರಿವಾಲ್ ಬಂಧನದ ಬಗ್ಗೆ ಜರ್ಮನಿ ಹೇಳಿಕೆ

ಕೇಜ್ರಿವಾಲ್ ಬಂಧನದ ಬಗ್ಗೆ ಜರ್ಮನಿ ಕೂಡ ಪ್ರಶ್ನೆಗಳನ್ನು ಎತ್ತಿತ್ತು. ಭಾರತ ಪ್ರಜಾಪ್ರಭುತ್ವ ರಾಷ್ಟ್ರ ಎಂದು ಹೇಳಲಾಗುತ್ತದೆ ಇಲ್ಲಿನ ನ್ಯಾಯಾಲಯ ಸ್ವತಂತ್ರವಾಗಿದೆ ಎಂದು ನಾವು ಭಾವಿಸುತ್ತೇವೆ. ಕೇಜ್ರಿವಾಲ್ ಅವರ ವಿಷಯದಲ್ಲೂ ಪ್ರಜಾಪ್ರಭುತ್ವದ ತತ್ವಗಳನ್ನು ಅನುಸರಿಸಲಾಗುವುದು ಎಂದು ನಂಬುತ್ತೇವೆ. ಕೇಜ್ರಿವಾಲ್ ಅವರಿಗೆ ಯಾವುದೇ ಅಡೆತಡೆಯಿಲ್ಲದೆ ಕಾನೂನು ನೆರವು ಸಿಗಬೇಕು ಎಂದು ಜರ್ಮನ್‌ ಹೇಳಿತ್ತು. ಇದಕ್ಕೆ ಭಾರತವೂ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಭಾರತವು ತಕ್ಷಣವೇ ಜರ್ಮನ್ ರಾಯಭಾರಿ ಕಚೇರಿಯ ಉಪ ಮುಖ್ಯಸ್ಥ ಜಾರ್ಜ್ ಎಂಜ್ವೀಲರ್ ಅವರನ್ನು ಕರೆಸಿತು ಮತ್ತು ಆಂತರಿಕ ವಿಷಯಗಳಲ್ಲಿ ವಿದೇಶಿ ಹಸ್ತಕ್ಷೇಪವನ್ನು ಭಾರತ ಸಹಿಸುವುದಿಲ್ಲ ಎಂದು ಹೇಳಿದೆ.

ಮಾರ್ಚ್ 28ರವರೆಗೆ ಇಡಿ ಕಸ್ಟಡಿಯಲ್ಲಿ ಕೇಜ್ರಿವಾಲ್

ರಾಜತಾಂತ್ರಿಕ ವಿಷಯದಲ್ಲಿ ರಾಷ್ಟ್ರಗಳು ಇತರರ ಸಾರ್ವಭೌಮತ್ವ ಮತ್ತು ಆಂತರಿಕ ವ್ಯವಹಾರಗಳನ್ನು ಗೌರವಿಸುವ ನಿರೀಕ್ಷೆಯಿದೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಹೇಳಿದೆ. ಭಾರತದ ನ್ಯಾಯಾಂಗವು ಸ್ವತಂತ್ರವಾಗಿದೆ, ನಮ್ಮ ನ್ಯಾಯಾಂಗ ಪ್ರಕ್ರಿಯೆಯಲ್ಲಿ ಅಮೆರಿಕ ಹಸ್ತಕ್ಷೇಪ ಮಾಡಬಾರದು, ಮದ್ಯ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21ರಂದು ಬಂಧಿಸಲಾಗಿದೆ. ಮಾರ್ಚ್ 28ರವರೆಗೆ ಇಡಿ ಕಸ್ಟಡಿಗೆ ಅವರನ್ನು ನೀಡಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು