Friday, April 4, 2025

ಸತ್ಯ | ನ್ಯಾಯ |ಧರ್ಮ

ಅಮೆರಿಕ: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ, ಮಕ್ಕಳ ಅಶ್ಲೀಲ ಚಿತ್ರಗಳ ಬಳಕೆ ಪ್ರಕರಣದಲ್ಲಿ ಭಾರತೀಯ ಪ್ರಜೆಗೆ 35 ವರ್ಷ ಜೈಲು ಶಿಕ್ಷೆ

ನ್ಯೂಯಾರ್ಕ್, ಏಪ್ರಿಲ್ 3: ಹಲವಾರು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 31 ವರ್ಷದ ಭಾರತೀಯ ಪ್ರಜೆಯೊಬ್ಬನನ್ನು ಅಮೆರಿಕದ ಫೆಡರಲ್ ನ್ಯಾಯಾಲಯವು ದೋಷಿ ಎಂದು ತೀರ್ಪು ನೀಡಿ 35 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಈ ವ್ಯಕ್ತಿಯ ಮೇಲೆ ಹದಿಹರೆಯದವರಂತೆ ಸೋಗು ಹಾಕಿ ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್‌ಗಳನ್ನು ಬಳಸಿ ಅಪ್ರಾಪ್ತ ವಯಸ್ಸಿನ ಹುಡುಗರು ಮತ್ತು ಹುಡುಗಿಯರೊಂದಿಗೆ ಸ್ನೇಹ ಬೆಳೆಸಿ ಅವರ ವಿಶ್ವಾಸ ಗಳಿಸಿದ ಆರೋಪವಿದೆ.

ಮಕ್ಕಳ ಬಳಿ ಅಶ್ಲೀಲ ಚಿತ್ರ ಕಳಿಸುವಂತೆ ಕೇಳುತ್ತಿದ್ದ ಅಪರಾಧಿಯು, ಕಳಿಸಿದೆ ಇದ್ದ ಸಂದರ್ಭಗಳಲ್ಲಿ ಬೆದರಿಕೆ ಒಡ್ಡುತ್ತಿದ್ದ ಎನ್ನಲಾಗಿದೆ.

ಮೂವರು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಮಕ್ಕಳ ಅಶ್ಲೀಲ ಚಿತ್ರಗಳನ್ನು ಹೊಂದಿದ್ದ ಆರೋಪದಡಿ ಭಾರತೀಯ ಪ್ರಜೆ ಸಾಯಿ ಕುಮಾರ್ ಕುರ್ರೆಮುಲಾಗೆ 420 ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ಯುಎಸ್ ಅಟಾರ್ನಿ ರಾಬರ್ಟ್ ಟ್ರೋಸ್ಟರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಸಾಯಿಕುಮಾರ್ ವಲಸೆ ವೀಸಾ‌ ಹೊಂದಿದ್ದು, ಓಕ್ಲಹೋಮಾದ ಎಡ್ಮಂಡ್‌ನಲ್ಲಿ ವಾಸಿಸುತ್ತಿದ್ದ.

ಕಳೆದ ವಾರ ಹೊರಡಿಸಿದ ಆದೇಶದಲ್ಲಿ, ಅಮೆರಿಕದ ಜಿಲ್ಲಾ ನ್ಯಾಯಾಧೀಶ ಚಾರ್ಲ್ಸ್ ಗುಡ್ವಿನ್, ಶಿಕ್ಷೆಯ ಅವಧಿ ಮುಗಿದ ನಂತರವೂ ಆರೋಪಿಯನ್ನು ಜೀವಿತಾವಧಿಗೆ ಕಣ್ಗಾವಲಿನಲ್ಲಿ ಇಡಲಾಗುತ್ತದೆ ಎಂದು ಹೇಳಿದ್ದಾರೆ.

ಸಾಯಿಕುಮಾರ್ ಸಂತ್ರಸ್ತರ ಕುಟುಂಬದ ಮೇಲೂ ದೌರ್ಜನ್ಯ ಎಸಗಿರುವುದಾಗಿ ನ್ಯಾಯಾಧೀಶರು ಹೇಳಿದ್ದಾರೆ

ಪ್ರಕರಣದ ವಿಚಾರಣೆಯ ಸಮಯದಲ್ಲಿ, ಸಾಯಿಕುಮಾರ್ ಅಪ್ರಾಪ್ತ ವಯಸ್ಕ ಬಾಲಕಿಯ ಮನೆಗೆ ಹೋಗಿ ಆಕೆಯ ಅಶ್ಲೀಲ ಚಿತ್ರಗಳನ್ನು ಆಕೆಯ ಪೋಷಕರಿಗೆ ತೋರಿಸುವುದಾಗಿ ಬೆದರಿಕೆ ಹಾಕಿದ್ದಾಗಿ ಒಪ್ಪಿಕೊಂಡಿದ್ದಾನೆ. ಅವನು ಮತ್ತೊಬ್ಬ ಅಪ್ರಾಪ್ತ ವಯಸ್ಕಳಿಗೆ ಆಕೆಯ ಅಶ್ಲೀಲ ಛಾಯಾಚಿತ್ರಗಳು ಮತ್ತು ವೀಡಿಯೊಗಳನ್ನು ಸಾರ್ವಜನಿಕಗೊಳಿಸುವುದಾಗಿಯೂ ಬೆದರಿಸಿದ್ದ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page