Saturday, March 22, 2025

ಸತ್ಯ | ನ್ಯಾಯ |ಧರ್ಮ

ಹಿಂದಿ ಹೇರಿಕೆ ಇಲ್ಲ|ದಕ್ಷಿಣ ರಾಜ್ಯಗಳೊಂದಿಗೆ ಸ್ಥಳೀಯ ಭಾಷೆಯಲ್ಲೇ ವ್ಯವಹರಿಸುವುದಾಗಿ ಘೋಷಿಸಿದ ಅಮಿತ್ ಶಾ

ನವದೆಹಲಿ: ಹಿಂದಿ ಹೇರಿಕೆ ವಿಚಾರವನ್ನು ದಕ್ಷಿಣ ರಾಜ್ಯಗಳು ಗಂಭೀರವಾಗಿ ಪರಿಗಣಿಸಿದ್ದು, ಕೇಂದ್ರದ ವಿರುದ್ಧ ಸಮರಸಾರಿದ್ದಾರೆ. ಈ ನಡುವೆ ಕೇಂದ್ರ ಸಚಿವ ಅಮಿತ್ ಶಾ ಡಿಸೆಂಬರ್ ನಿಂದ ಕರ್ನಾಟಕ ಸೇರಿದಂತೆ ಇತರೆ ದಕ್ಷಿಣ ರಾಜ್ಯಗಳೊಂದಿಗೆ ಸ್ಥಳೀಯ ಭಾಷೆಯಲ್ಲೇ ಪತ್ರ ವ್ಯವಹಾರ ನಡೆಸಲಾಗುತ್ತದೆ ಎಂದು ಘೋಷಿಸಿದ್ದಾರೆ. 

ಕರ್ನಾಟಕ ಸರ್ಕಾರದ ಜತೆ ಕನ್ನಡದಲ್ಲಿ, ತಮಿಳುನಾಡಿನ ಜತೆ ತಮಿಳು ಹಾಗೂ ಇತರ ರಾಜ್ಯಗಳ ಜತೆ ಅಲ್ಲಿನ ಭಾಷೆಯಲ್ಲೇ ಸಂವಹನ ನಡೆಸುವುದಾಗಿ ತಿಳಿಸಿದ್ದಾರೆ. ಶುಕ್ರವಾರ ರಾಜ್ಯಸಭೆಯಲ್ಲಿ ಸ್ಥಳೀಯ ಭಾಷೆ ವಿಚಾರವಾಗಿ ನಡೆದ ಚರ್ಚೆಯಲ್ಲಿ ಮಾತನಾಡಿದ ಅಮಿತ್​ ಶಾ ಡಿಸೆಂಬರ್ ಬಳಿಕ ಮುಖ್ಯಮಂತ್ರಿಗಳು, ಸಚಿವರು ಮತ್ತು ಸಂಸತ್ ಸದಸ್ಯರೊಂದಿಗೆ ಅವರದೇ ಭಾಷೆಯಲ್ಲಿ ಪತ್ರವ್ಯವಹಾರ ಮಾಡುವುದಾಗಿ ತಿಳಿಸಿದ್ದಾರೆ.

ತಮ್ಮ ಭ್ರಷ್ಟಾಚಾರವನ್ನು ಮರೆಮಾಚಲು ಭಾಷೆಯ ಹೆಸರಿನಲ್ಲಿ ರಾಜಕೀಯ ನಡೆಸುವವರಿಗೆ ಇದು ಬಲವಾದ ಪ್ರತ್ಯುತ್ತರವಾಗಿದೆ ಎಂದಿರುವ ಅಮಿತ್ ಶಾ, ಬಿಜೆಪಿ ದಕ್ಷಿಣ ಭಾರತದ ಭಾಷೆಗಳನ್ನು ವಿರೋಧಿಸುತ್ತದೆ ಎಂಬ ವಿಚಾರಕ್ಕೆ ತಿರುಗೇಟು ನೀಡಿದ್ದಾರೆ.

ನಾವು ದಕ್ಷಿಣದ ಭಾಷೆಗಳನ್ನು ವಿರೋಧಿಸುತ್ತಿದ್ದೇವೆ ಅಂತಾರೆ ಇದು ಹೇಗೆ? ನಾನು ಗುಜರಾತ್‌ ನಿಂದ ಬಂದವನು. ನಿರ್ಮಲಾ ಸೀತಾರಾಮನ್ ತಮಿಳುನಾಡಿನವರು. ಹೀಗಿದ್ದಾಗ ನಾವು ಪ್ರಾದೇಶಿಕ ಭಾಷೆಗಳನ್ನು ಹೇಗೆ ವಿರೋಧಿಸಲು ಸಾಧ್ಯ ಎಂದು ಅಮಿತ್ ಶಾ ಪ್ರಶ್ನೆ ಮಾಡಿದ್ದಾರೆ. 

Related Articles

ಇತ್ತೀಚಿನ ಸುದ್ದಿಗಳು

You cannot copy content of this page