Thursday, July 31, 2025

ಸತ್ಯ | ನ್ಯಾಯ |ಧರ್ಮ

ರಾಜ್ಯದಲ್ಲಿ ಮತ್ತೊಂದು ‘ಹೃದಯ’ ವಿದ್ರಾವಕ ಘಟನೆ ; 11 ವರ್ಷದ ಬಾಲಕ ಹೃದಯಾಘಾತಕ್ಕೆ ಬಲಿ

ಇತ್ತೀಚಿನ ದಿನಗಳಲ್ಲಿ ಚಿಕ್ಕ ಮಕ್ಕಳಲ್ಲಿ ಹೃದಯಾಘಾತ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಎಲ್ಲೆಡೆ ಆತಂಕ ಮೂಡಿಸಿದೆ. ಇತ್ತೀಚೆಗೆ ರಾಯಚೂರಿನಲ್ಲಿ 14 ವರ್ಷದ ಬಾಲಕ ಹೃದಯಾಘಾತಕ್ಕೆ ಮೃತಪಟ್ಟ ಘಟನೆ ಮಾಸುವ ಮುನ್ನವೇ ಮತ್ತೊಂದು ಚಿಕ್ಕ ವಯಸ್ಸಿನ ಬಾಲಕ ಮೃತಪಟ್ಟಿದ್ದಾನೆ.

11 ವರ್ಷದ ಬಾಲಕ ಹೃದಯಘಾತದಿಂದ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಬಾಲಕನನ್ನು ಸಚಿನ್ ಎಂದು ಗುರುತಿಸಲಾಗಿದೆ.

ಚನ್ನಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ಬಾಲಕನಿಗೆ ಇದ್ದಕಿದ್ದಂತೆ ಎದೆನೋವು ಕಾಣಿಸಿಕೊಂಡಿದೆ. ಶಾಲೆಗೆ ಹೋಗದೇ ಮನೆಯಲ್ಲಿ ಕುಳಿತಿದ್ದ ಬಾಲಕನಿಗೆ ಎದೆನೋವು ತೀವ್ರವಾಗಿತ್ತು. ಆನಂತರ ಕುಸಿದು ಬಿದ್ದ ಬಾಲಕ ಸಚಿನ್ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page