Tuesday, June 25, 2024

ಸತ್ಯ | ನ್ಯಾಯ |ಧರ್ಮ

ಅಂಗನವಾಡಿಗಳಲ್ಲಿ ಪೂರ್ವ ಪ್ರಾಥಮಿಕ (LKG UKG) ತರಗತಿಗಳಿಗೆ ಸರ್ಕಾರದಿಂದ ಅನುಮತಿ

ಬೆಂಗಳೂರು: ಸರ್ಕಾರದ ಅಂಗನವಾಡಿಗಳಲ್ಲಿ LKG ಹಾಗೂ UKG ತರಗತಿಗಳನ್ನು ನಡೆಸಬೇಕು ಎನ್ನುವ ಹಲವು ದಿನಗಳ ಬೇಡಿಕೆಗೆ ಮುಖ್ಯಮಂತ್ರಿ ಒಪ್ಪಿಗೆ ನೀಡಿದ್ದಾರೆ. ಅಂಗನವಾಡಿಗಳನ್ನು ಮೇಲು ಸ್ತರಕ್ಕೆ ತರಲು ಬೇಕಾದ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ತಿಳಿಸಿದ್ದಾರೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸೋಮವಾರ ಮುಖ್ಯ ಮಂತ್ರಿ ಸಿದ್ದರಾಮಯ್ಯ ಜತೆಗೆ ಸಭೆ ನಡೆಸಿದ ಬಳಿಕ ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ (ಎಲ್‌ಕೆಜಿ, ಯುಕೆಜಿ) ಶಿಕ್ಷಣ ನೀಡುವ ಬಗ್ಗೆ ತಜ್ಞರ ಸಮಿತಿ ರಚಿಸಲು ಮುಖ್ಯಮಂತ್ರಿ ಸೂಚಿಸಿದ್ದಾರೆ ಎಂದು ಹೇಳಿದರು.

ಗುಣಮಟ್ಟದ ಶಿಕ್ಷಣ ಹಾಗೂ ಪೌಷ್ಟಿಕ ಆಹಾರ ನೀಡುವುದು ಸರ್ಕಾರದ ಮುಖ್ಯ ಗುರಿ ಎಂದ ಅವರು ಮುಂದುವರೆದು “ಅಗತ್ಯಕ್ಕೆ ತಕ್ಕಂತೆ ಅಂಗನವಾಡಿಗಳನ್ನು ಮೇಲ್ದರ್ಜೆಗೇರಿಸುವುದರ ಜೊತೆಗೆ, ಮಕ್ಕಳಿಗೆ ಇಲಾಖೆಯ ಮೂಲಕವೇ ಸಮವಸ್ತ್ರ, ಪುಸ್ತಕ, ಬ್ಯಾಗ್‌ ನೀಡಲು ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿದ್ದಾರೆ” ಎಂದು ಹೇಳಿದರು.

ಇನ್ನು ಮುಂದೆ ಅಂಗನವಾಡಿಗಳಲ್ಲೂ ಶಾಲೆಗಳಂತೆ ವರ್ಗಾವಣೆ ಪ್ರಮಾಣಪತ್ರವನ್ನು (TC) ಸಹ ನೀಡಲಾಗುತ್ತದೆ ಎಂದು ಅವರು ಹೇಳಿದರು.

ಪೂರ್ವ ಪ್ರಾಥಮಿಕ ಶಿಕ್ಷಣದ ಭಾಗವಾಗಿ ಮಕ್ಕಳಿಗೆ ಇಂಗ್ಲಿಷ್‌, ಕನ್ನಡ ಎರಡನ್ನೂ ಕಲಿಸಲಾಗುತ್ತದೆ.

ಅಂಗನವಾಡಿ ಶಿಕ್ಷಕಿಯರ ಪೈಕಿ 9 ಸಾವಿರ ಮಂದಿ ಪದವಿ ಪಡೆದವರಾಗಿ ದ್ದರೆ ಒಂದೂವರೆ ಸಾವಿರ ಕ್ಕಿಂತಲೂ ಹೆಚ್ಚು ಮಂದಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಹೀಗಾಗಿ ಗುಣಮಟ್ಟದ ಶಿಕ್ಷಣ ನೀಡಿಕೆಗೆ ಯಾವುದೇ ಸಮಸ್ಯೆ ಆಗದು. ಯಾರನ್ನೂ ಕೆಲಸದಿಂದ ತೆಗೆಯುವ ಪ್ರಶ್ನೆಯೇ ಇಲ್ಲ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಈ ಸಂದರ್ಭದಲ್ಲಿ ಹೇಳಿದರು.

Related Articles

ಇತ್ತೀಚಿನ ಸುದ್ದಿಗಳು