Tuesday, January 27, 2026

ಸತ್ಯ | ನ್ಯಾಯ |ಧರ್ಮ

ಅತ್ಯಾ*ಚಾರ ಪ್ರಕರಣ : ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು ಮಂಜೂರು

ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಾಸಕ ಮುನಿರತ್ನಗೆ ಜಾಮೀನು ಮಂಜೂರು ಮಾಡಿದೆ.

ಸಂತ್ರಸ್ತ ಮಹಿಳೆಯು ಮುನಿರತ್ನ ತನ್ನ ಮೇಲೆ ಅತ್ಯಾಚಾರ ಮಾಡಿದ್ದಲ್ಲದೆ, ಹಲವರಿಗೆ ಹನಿಟ್ರ್ಯಾಪ್‌ ಕೂಡ ಮಾಡುತ್ತಿದ್ದರು. ಇದರಲ್ಲಿ ಮಾಜಿ ಸಿಎಂಗಳೂ ಇದ್ದಾರೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದರು.

ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕರಾದ ಮುನಿರತ್ನ ನನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ರಾಮನಗರದ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡು ಮುನಿರತ್ನ ಅವರನ್ನು ಬಂಧಿಸಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page