Thursday, July 4, 2024

ಸತ್ಯ | ನ್ಯಾಯ |ಧರ್ಮ

ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ : 15 ದಿನಗಳಲ್ಲಿ 10 ದುರಂತಗಳು

ಬಿಹಾರ ಕೇವಲ ಎರಡೇ ವಾರಗಳಲ್ಲಿ 10 ನೇ ಸೇತುವೆ ಕುಸಿತಕ್ಕೆ ಸಾಕ್ಷಿಯಾಗಿದೆ ಎಂದು ಅಧಿಕಾರಿಗಳು ಗುರುವಾರ ವರದಿ ಮಾಡಿದ್ದಾರೆ. ಇತ್ತೀಚಿನ ಘಟನೆಯು ಬಿಹಾರದ ಸರನ್‌ನಲ್ಲಿ ಸಂಭವಿಸಿದೆ. ಕಳೆದ 24 ಗಂಟೆಗಳಲ್ಲಿ ಈ ರೀತಿಯಾಗಿ ಕುಸಿತ ಕಂಡ ಎರಡನೇ ಸೇತುವೆ ಇದಾಗಿದೆ ಎಂದು ವರದಿಯಾಗಿದೆ.

ಸ್ಥಳೀಯ ಅಧಿಕಾರಿಗಳು 15 ವರ್ಷಗಳ ಹಿಂದೆ ನಿರ್ಮಿಸಿದ ಈ ಸೇತುವೆ ಇಂದು ಬೆಳಿಗ್ಗೆ ಕುಸಿದು ಬಿದ್ದ ನಂತರ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ಹೇಳಿದರು.

ಗಂಡಕೀ ನದಿಯ ಮೇಲಿನ ಸಣ್ಣ ಸೇತುವೆಯು ಬನೇಯಪುರ ಬ್ಲಾಕ್‌ನಲ್ಲಿದೆ. ಅದು ಸರನ್‌ನ ಹಲವಾರು ಹಳ್ಳಿಗಳನ್ನು ನೆರೆಯ ಸಿವಾನ್ ಜಿಲ್ಲೆಯೊಂದಿಗೆ ಸಂಪರ್ಕಿಸುತ್ತದೆ. ”ಸಣ್ಣ ಸೇತುವೆಯನ್ನು 15 ವರ್ಷಗಳ ಹಿಂದೆ ನಿರ್ಮಿಸಲಾಗಿತ್ತು. ನಾನು ಸ್ಥಳಕ್ಕೆ ಹೋಗುತ್ತಿದ್ದೇನೆ. ಅಧಿಕಾರಿಗಳು ಈಗಾಗಲೇ ಅಲ್ಲಿಗೆ ತಲುಪಿದ್ದಾರೆ. ಸೇತುವೆ ಕುಸಿತಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ ಇತ್ತೀಚೆಗೆ ಹೂಳು ತೆಗೆಯುವ ಕೆಲಸವನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಪಿಟಿಐಗೆ ತಿಳಿಸಿದರು.

ಸ್ಥಳೀಯರ ಪ್ರಕಾರ, ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯೇ ಈ ಸಣ್ಣ ಸೇತುವೆಗಳ ಕುಸಿತಕ್ಕೆ ಕಾರಣವಾಗಿದೆ. ಕಳೆದ 16 ದಿನಗಳಲ್ಲಿ ಸಿವಾನ್, ಸರನ್, ಮಧುಬನಿ, ಅರಾರಿಯಾ, ಪೂರ್ವ ಚಂಪಾರಣ್ ಮತ್ತು ಕಿಶನ್‌ಗಂಜ್ ಜಿಲ್ಲೆಗಳಲ್ಲಿ ಒಟ್ಟು 10 ಸೇತುವೆಗಳು ಕುಸಿದಿವೆ.

Related Articles

ಇತ್ತೀಚಿನ ಸುದ್ದಿಗಳು