Wednesday, January 7, 2026

ಸತ್ಯ | ನ್ಯಾಯ |ಧರ್ಮ

ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಹತ್ಯೆ: 18 ದಿನಗಳಲ್ಲಿ ಆರು ಬಲಿ!

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದಾಳಿಗಳು ತೀವ್ರಗೊಂಡಿವೆ. ಹಿಂದೂ ಪತ್ರಕರ್ತನೊಬ್ಬನನ್ನು ಗುಂಡಿಕ್ಕಿ ಕೊಂದ ಕೇವಲ 24 ಗಂಟೆಗಳ ಒಳಗೆ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಅಮಾನುಷವಾಗಿ ಹತ್ಯೆ ಮಾಡಲಾಗಿದೆ.

ನಾರ್ಸಿಂಗ್‌ದಿ ನಗರದ ನಿವಾಸಿ, ಕಿರಾಣಿ ಅಂಗಡಿ ಮಾಲೀಕ ಶರತ್ ಚಕ್ರವರ್ತಿ (40) ಎಂಬುವವರೇ ಈ ಬಾರಿ ದುಷ್ಕರ್ಮಿಗಳ ಗುರಿಗೆ ತುತ್ತಾದವರು. ಸೋಮವಾರ ರಾತ್ರಿ ಚಾರ್‌ಸಿಂದೂರ್ ಬಜಾರ್‌ನಲ್ಲಿರುವ ತಮ್ಮ ಅಂಗಡಿಯನ್ನು ಮುಚ್ಚಿ ಮನೆಗೆ ಮರಳುತ್ತಿದ್ದಾಗ, ದಾರಿಯಲ್ಲಿ ಹೊಂಚು ಹಾಕಿದ್ದ ದುಷ್ಕರ್ಮಿಗಳ ತಂಡವು ಇವರ ಮೇಲೆ ಕತ್ತಿಗಳಿಂದ ಭೀಕರವಾಗಿ ದಾಳಿ ನಡೆಸಿ ಕೊಲೆ ಮಾಡಿದೆ.

ವಿಶೇಷವೆಂದರೆ, ಶರತ್ ಚಕ್ರವರ್ತಿ ಡಿಸೆಂಬರ್ 19 ರಂದು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಬಾಂಗ್ಲಾದೇಶದ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ತಾವು ವಾಸಿಸುತ್ತಿರುವ ಪ್ರದೇಶವು ‘ಮರಣ ಕಣಿವೆ’ (Valley of Death) ಆಗಿ ಬದಲಾಗಿದೆ ಎಂದು ಅವರು ಪೋಸ್ಟ್ ಮಾಡಿದ್ದರು. ಬಾಂಗ್ಲಾದಲ್ಲಿ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯದ ವಿರುದ್ಧ ಧ್ವನಿ ಎತ್ತಿದ್ದೇ ಅವರ ಕೊಲೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.

ಪತ್ರಕರ್ತ ರಾಣಾ ಪ್ರತಾಪ್ ಹತ್ಯೆಯ ನಂತರ ನಡೆದ ಈ ಘಟನೆಯು ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯದವರಲ್ಲಿ ಮತ್ತಷ್ಟು ಆತಂಕವನ್ನು ಮೂಡಿಸಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page