ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮತ್ತೋರ್ವ ಕನ್ನಡಿಗನ ಸಾವು

ಜಮ್ಮು – ಕಾಶ್ಮೀರ : ಕಣಿವೆ ರಾಜ್ಯ ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮತ್ತೋರ್ವ ಕನ್ನಡಿಗ ಸಾವನ್ನಪ್ಪಿದ್ದಾನೆ.

ಉಗ್ರರ ದಾಳಿಯಲ್ಲಿ ಶಿವಮೊಗ್ಗದ ಮಂಜುನಾಥ್‌ ಅಲ್ಲದೇ ಮತ್ತೊಬ್ಬ ಕನ್ನಡಿಗ ಭರತ್‌ ಭೂಷಣ್‌ ಎಂಬಾತ ಜೀವ ಕಳೆದುಕೊಂಡಿದ್ದಾನೆ

ಮೂಲತಃ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನವರಾದ ಭರತ್ ಬೆಂಗಳೂರಿನಲ್ಲಿ ವಾಸವಿದ್ದರು. ಕಾಶ್ಮೀರದ ಪಹಲ್ ಗಾಮ್ಗೆ ಪ್ರವಾಸಕ್ಕೆಂದು ತೆರಳಿದ್ದ ಭರತ್ ಉಗ್ರರ ಗುಂಡೇಟಿಗೆ ಬಲಿಯಾಗಿದ್ದಾನೆ.

ಜಮ್ಮು ಕಾಶ್ಮೀರದ ಪ್ರವಾಸಿ ಕೇಂದ್ರದಲ್ಲಿದ್ದವರನ್ನು ಗುರಿಯಾಗಿಸಿಕೊಂಡು ನಡೆದಿದ್ದ ಉಗ್ರರ ದಾಳಿಯಲ್ಲಿ 27 ಮಂದಿ ಮೃತರಾಗಿದ್ದಾರೆ ಎನ್ನಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು