Wednesday, October 15, 2025

ಸತ್ಯ | ನ್ಯಾಯ |ಧರ್ಮ

ಜಾತಿ ದೌರ್ಜನ್ಯಕ್ಕೆ ಪೊಲೀಸ್ ಅಧಿಕಾರಿ ಆತ್ಮಹತ್ಯೆ; ಹರಿಯಾಣದಲ್ಲಿ ಮತ್ತೊಂದು ಆಘಾತಕಾರಿ ಘಟನೆ

ಹರಿಯಾಣದಿಂದ ಮತ್ತೊಂದು ಪೊಲೀಸ್ ಅಧಿಕಾರಿಯ ಶಂಕಿತ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಐಪಿಎಸ್ ಅಧಿಕಾರಿ ವೈ ಪೂರಣ್ ಕುಮಾರ್ ಅವರ ಸಾವು ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾದ ಕೆಲವೇ ದಿನಗಳ ನಂತರದಲ್ಲಿ ಈ ಪ್ರಕರಣ ಈಗ ದೇಶಾದ್ಯಂತ ಮತ್ತೊಂದು ಸಂಚಲನ ಸೃಷ್ಟಿಸಿದೆ.

ರೋಹ್ಟಕ್‌ನ ಸೈಬರ್ ಸೆಲ್‌ನಲ್ಲಿ ಸಹಾಯಕ ಸಬ್-ಇನ್‌ಸ್ಪೆಕ್ಟರ್ ಆಗಿ ನೇಮಕಗೊಂಡಿದ್ದ ಸಂದೀಪ್ ಕುಮಾರ್, ಹತ್ಯೆಗೀಡಾದ ಪೊಲೀಸ್ ಪೂರಣ್ ಕುಮಾರ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ ನಂತರ ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪೊಲೀಸರ ಪ್ರಕಾರ, ರೋಹ್ಟಕ್‌ನ ಲಧೌತ್-ಧಮರ್ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಗುಂಡೇಟಿನಿಂದ ಗಾಯಗೊಂಡ ಸ್ಥಿತಿಯಲ್ಲಿ ಸಂದೀಪ್ ಅವರ ದೇಹವು ಪತ್ತೆಯಾಗಿದೆ. ಎಎಸ್‌ಐ ಸ್ವತಃ ಗುಂಡು ಹಾರಿಸಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ 6 ನಿಮಿಷ 26 ಸೆಕೆಂಡುಗಳ ವೀಡಿಯೊದಲ್ಲಿ, ಸಂದೀಪ್ ತನ್ನ ಈ ಕಠಿಣ ನಿರ್ಧಾರಕ್ಕೆ ರೋಹ್ಟಕ್‌ನ ಐಜಿಪಿ ಕಚೇರಿಯಲ್ಲಿ ನಿಯೋಜಿಸಲಾದ ಕೆಲವು ಪೊಲೀಸ್ ಅಧಿಕಾರಿಗಳೇ ಕಾರಣ ಎಂದು ಹೇಳಿದ್ದಾರೆ. ಅವರು ಭ್ರಷ್ಟಾಚಾರಕ್ಕೆ ಉತ್ತೇಜನ ನೀಡಿದ್ದಾರೆ, ಜಾತಿ ಆಧಾರಿತ ತಾರತಮ್ಯದ ಮೂಲಕ ಸಹ ಅಧಿಕಾರಿಗಳಿಗೆ ಕಿರುಕುಳ ನೀಡುತ್ತಿದ್ದಾರೆ ಮತ್ತು ಪ್ರಾಮಾಣಿಕ ಪೊಲೀಸ್ ಸಿಬ್ಬಂದಿಯ ವಿರುದ್ಧ ದೌರ್ಜನ್ಯ ಎಸಗುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಸಂದರ್ಭದಲ್ಲಿ ಅವರು ಈ ಹಿಂದೆ ಆತ್ಮಹತ್ಯೆ ಮಾಡಿಕೊಂಡ ಐಪಿಎಸ್ ಅಧಿಕಾರಿ ವೈ ಪುರಣ್ ಕುಮಾರ್ ಅವರನ್ನೂ ಉಲ್ಲೇಖಿಸಿದ್ದಾರೆ.

ವೈ ಪೂರಣ್ ಕುಮಾರ್ ಒಬ್ಬ “ಭ್ರಷ್ಟ ಪೊಲೀಸ್” ಆಗಿದ್ದು, ತನ್ನ ಭ್ರಷ್ಟಾಚಾರ ಬಯಲಾಗುತ್ತದೆ ಎಂಬ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸಂದೀಪ್ ಆರೋಪಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page