ಸಕಲೇಶಪುರ : ಜಿಲ್ಲೆಯಲ್ಲಿ ಮತ್ತೆ ಕಾಡಾನೆ ದಾಳಿಗೆ ಯುವಕನೋರ್ವ ಮೃತಪಟ್ಟಿರುವ ಘಟನೆ ಬೇಲೂರು ತಾಲೂಕಿನ ಬ್ಯಾದನೆ ಗ್ರಾಮದಲ್ಲಿ ನಡೆದಿದೆ.
ಗುಜನಹಳ್ಳಿ ಗ್ರಾಮದ 28 ವರ್ಷದ ಯುವಕ ಅನಿಲ್ ಕಾಡಾನೆ ತುಳಿತಕ್ಕೆ ಮೃತಪಟ್ಟಿರುವ ಯುವಕನಾಗಿದ್ದಾನೆ.
ಅನಿಲ್, ಅಣ್ಣಮಲೈ ಎಸ್ಟೇಟ್‌ನಲ್ಲಿ ಕೆಲಸ ಮಾಡುತ್ತಿದ್ದ. ಕೆಲಸ ಮುಗಿಸಿ ಮನೆಗೆ ತೆರಳುವ ವೇಳೆ ಕಾಡಾನೆ ದಾಳಿ ನಡೆಸಿದ್ದು, ಸೊಂಡಲಿನಿಂದ ಎತ್ತಿ ಬಿಸಾಡಿದ ಬಳಿಕ ತುಳಿದು ಸಾಯಿಸಿದೆ.
ಘಟನೆ ತಿಳಿದ ಸ್ಥಳೀಯರು ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ, ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ಪರಿಶೀಲಿಸಿದರು. ಮೃತನ ಪೋಷಕರ ಆಕ್ರಂದನ ಆಕಾಶ ಮುಟ್ಟಿದ್ದು, ಬೆಳಗಾರರು ತೋಟ ಕಾರ್ಮಿಕರು ಕೆಲಸಕ್ಕೆ ಹೋಗಲು ಭಯ ಪಡುತ್ತಿದ್ದಾರೆ
ಈ ಸಂಬಂಧ ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.