Saturday, April 27, 2024

ಸತ್ಯ | ನ್ಯಾಯ |ಧರ್ಮ

ಅಂತರ್ಜಾತಿ ಯುವಕನೊಂದಿಗೆ ಯುವತಿ ಪರಾರಿ :ಕುಟುಂಬದ ಮೂವರ ಆತ್ಮಹತ್ಯೆ

ಚಿಕ್ಕಬಳ್ಳಾಪುರ : ಅಂತರ್ಜಾತಿ ಹುಡುಗನೊಂದಿಗೆ ಮಗಳು ನಾಪತ್ತೆಯಾದ ಕಾರಣ ಮನನೊಂದ ಮನೆಯವರು ಡೆತ್‌ ನೋಟ್‌ ಬರೆದಿಟ್ಟು ಒಂದೇ ಕುಟುಂಬದ ಮೂರು ಜನ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿಡ್ಲಘಟ್ಟ ತಾಲ್ಲೂಕಿನ ಹಂಡಿಗನಾಳ ಗ್ರಾಮದಲ್ಲಿ ನಡೆದಿದೆ.

ಬೇರೆ ಜಾತಿಯವನಾದ ಆಟೋ ಚಾಲಕ ನಾರಾಯಣ ಸ್ವಾಮಿ ಎಂಬುವವನ ಜೊತೆ ತನ್ನ ಮಗಳು ಅರ್ಚನ ಪರಾರಿಯಾಗಿದ್ದಾಳೆ. ಇದರಿಂದ ನಾವೆಲ್ಲಾ ಮನನೊಂದಿದ್ದೇವೆ. ನಮ್ಮ ಮೂರು ಜನ ಸಾವಿಗೆ ನಮ್ಮ ಮಗಳು ಅರ್ಚನ ಕಾರಣ ಎಂದು ಡೆತ್‌ ನೋಟ್‌ನಲ್ಲಿ ಬರೆದಿಟ್ಟು, ವಿಷದ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮಾಹಿತಿ ತಿಳಿದ ನಂತರ ಹೆಚ್ಚುವರಿ ಪೋಲೀಸ್‌ ವರಿಷ್ಠಾಧಿಕಾರಿ ಕುಶಾಲ್‌ ಚೌಕ್ಸೆ, ಸಿಪಿಐ ನಂದನ್‌ ಕುಮಾರ್‌, ಗ್ರಾಮಾಂತರ ಪೋಲೀಸ್‌ ಠಾಣೆಯ ಪಿಎಸ್‌ಐ ಸತೀಶ್‌ ಮತ್ತು ಸಿಬ್ಬಂದಿ ವರ್ಗದವರು ಸ್ಥಳಕ್ಕೆ ಭೇಟಿ ನೀಡಿದ್ದು, ಅರ್ಚನಾಳ ತಂದೆ ಶ್ರೀರಾಮಪ್ಪ(69), ತಾಯಿ ಸರೋಜ(55) ಮತ್ತು ಸಹೋದರ (25) ಮೃತಪಟ್ಟವರಾಗಿದ್ದಾರೆ.

ಘಟನೆಯ ಕುರಿತು ಶಿಡ್ಲಘಟ್ಟ ಗ್ರಾಮಾಂತರ ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

🔸 ಪೀಪಲ್‌ ಗ್ರೂಪ್‌ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
https://chat.whatsapp.com/G94DLKaJrsBH07M7DvkqRo

ಇದನ್ನೂ ನೋಡಿ: ವಸಾಹತುಶಾಹಿಗೆ ಚಳ್ಳೆಹಣ್ಣು ತಿನ್ನಿಸಿದ ಶೂದ್ರ ರಾಣಿ ರಾಶ್ಮೋನಿ

ಕುಟಿಲ ವಸಾಹತುಶಾಹಿ ಕಂಪನಿಗೆ ಚಳ್ಳೆಹಣ್ಣು ತಿನ್ನಿಸಿ ಕೋಲ್ಕತಾದ ಹೂಗ್ಲಿ ನದಿ ತಟದಲ್ಲಿ ಕಾಳಿಕಾ ದೇವಿಗೆ ದಕ್ಷಿಣೇಶ್ವರ ದೇವಾಲಯ ನಿರ್ಮಿಸಿದ ಶೂದ್ರ ರಾಣಿ ರಾಶ್ಮೋನಿ ಭಾರತದ ಇತಿಹಾಸದ ಒಂದು ದಂತಕತೆ. ಸಹಾಯಕ ಪ್ರಾಧ್ಯಾಪಕರಾದ ಪುನೀತ್‌ ಕುಮಾರ್‌ ರಾಶ್ಮೋನಿಯ ಕತೆಯನ್ನು ಇಲ್ಲಿ ಹೇಳಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು