Home ಬ್ರೇಕಿಂಗ್ ಸುದ್ದಿ ಧರ್ಮಸ್ಥಳ ಪ್ರಕರಣ: ‘ದೂತ’ ಸಮೀರ್ ಎಂಡಿ’ಗೆ ನಿರೀಕ್ಷಣಾ ಜಾಮೀನು ಮಂಜೂರು

ಧರ್ಮಸ್ಥಳ ಪ್ರಕರಣ: ‘ದೂತ’ ಸಮೀರ್ ಎಂಡಿ’ಗೆ ನಿರೀಕ್ಷಣಾ ಜಾಮೀನು ಮಂಜೂರು

0

ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿದ್ದ ಸುಮೋಟೋ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀ‌ರ್ ಅವರಿಗೆ ಮಂಗಳೂರಿನ ಜಿಲ್ಲಾ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಧರ್ಮಸ್ಥಳದ ಕುರಿತು ಅವಹೇಳನಕಾರಿ ಮತ್ತು ಪ್ರಚೋದನಕಾರಿ ವಿಷಯಗಳನ್ನು ಪ್ರಸಾರ ಮಾಡಿದ ಆರೋಪದ ಮೇಲೆ ಸಮೀರ್ ಮೇಲೆ ಧರ್ಮಸ್ಥಳ ಠಾಣೆಯಲ್ಲೇ ಸುಮೋಟೋ ಪ್ರಕರಣ ದಾಖಲಾಗಿತ್ತು.

ಸಮೀರ್ ತನ್ನ ಯೂಟ್ಯೂಬ್ ಖಾತೆಯಲ್ಲಿ ಹಂಚಿಕೊಂಡು ವೀಡಿಯೊ ಸಾರ್ವಜನಿಕರಲ್ಲಿ ಪ್ರಚೋದನೆ ಉಂಟುಮಾಡುವ ಉದ್ದೇಶವನ್ನು ಹೊಂದಿದೆ ಎಂದು ದೂರಿ, ಧರ್ಮಸ್ಥಳ ಠಾಣೆಯ ಪೊಲೀಸರು ಸ್ವಯಂಪ್ರೇರಿತವಾಗಿ (ಸುಮೋಟೋ) ಪ್ರಕರಣ ದಾಖಲಿಸಿಕೊಂಡಿದ್ದರು. ಕೃತಕ ಬುದ್ಧಿಮತ್ತೆ (AI) ತಂತ್ರಗಾರಿಕೆ ಬಳಸಿ ಮಾಡಿದ ವಿಡಿಯೋ ನಂತರ ನೇರವಾಗಿ ಧರ್ಮಸ್ಥಳ ಆಡಳಿತಾಧಿಕಾರಿಗೆ ತಾಗುವಂತೆ ಮಾಡಿದ ಹಿನ್ನೆಲೆಯಲ್ಲಿ ಧರ್ಮಸ್ಥಳ ಪೊಲೀಸರೇ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 192, 240, ಮತ್ತು 353(1) (ಬಿ) ಅಡಿಯಲ್ಲಿ ಪ್ರಚೋದನೆ ನೀಡುವ ಮತ್ತು ಸುಳ್ಳು ಮಾಹಿತಿ ಹರಡುವ ಆರೋಪದ ಮೇಲೆ ಪ್ರಕರಣವನ್ನು ದಾಖಲಿಸಲಾಗಿತ್ತು.

ಬಂಧನದ ಭೀತಿಯಲ್ಲಿದ್ದ ಸಮೀರ್, ಮಂಗಳೂರಿನ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು, ಇದೀಗ ಸಮೀರ್ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.

You cannot copy content of this page

Exit mobile version