Thursday, July 3, 2025

ಸತ್ಯ | ನ್ಯಾಯ |ಧರ್ಮ

ಜಾತಿ ಗೊತ್ತಿಲ್ಲದವರು ಜನಗಣತಿ ಬಗ್ಗೆ ಮಾತನಾಡುತ್ತಾರೆ: ಹೀನಾಯ ಹೇಳಿಕೆ ನೀಡಿದ ಅನುರಾಗ್‌ ಠಾಕೂರ್

ಇಂದು ಸದನವು ಅನುರಾಗ್ ಠಾಕೂರ್ ಮತ್ತು ರಾಹುಲ್ ಗಾಂಧಿ ನಡುವೆ ತೀವ್ರ ವಾಗ್ವಾದಕ್ಕೆ ಸಾಕ್ಷಿಯಾಯಿತು.

ರಾಹುಲ್‌ ಗಾಂಧಿಯವರು ಜಾತಿ ಗಣತಿ ವಿಷಯದಲ್ಲಿ ಬಿಜೆಪಿ ಸಂಸದ ತನ್ನನ್ನು ನಿಂದಿಸಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಆದರೆ ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ಅನುರಾಗ್ ಠಾಕೂರ್, ‘ಜಾತಿ ಗೊತ್ತಿಲ್ಲದವರು ಜನಗಣತಿ ಬಗ್ಗೆ ಮಾತನಾಡುತ್ತಾರೆ ಎಂದು ಹೇಳಿದ್ದೆ. ನಾನು ಯಾರ ಹೆಸರನ್ನೂ ಹೇಳಿಲ್ಲ ಎಂದು ಹಾರಿಕೆಯ ಉತ್ತರವನ್ನು ಕೊಟ್ಟಿದ್ದಾರೆ. ಮೊದಲಿನಿಂದಲೂ ಹೀನ ಮತ್ತು ಅಹಂಕಾರದ ಹೇಳಿಕೆಗಳಿಗೆ ಖ್ಯಾತರಾಗಿರುವ ಠಾಕೂರ್‌ ಈ ಹಿಂದೆಯೂ ಹಲವು ವಿವಾದಸ್ಪದ ಹೇಳಿಕೆಗಳನ್ನು ನೀಡಿ ವಿವಾದಕ್ಕೆ ಈಡಾಗಿದ್ದರು.

ರಾಹುಲ್‌ ಗಾಂಧಿ ಚುನಾವಣೆಗೂ ಮುಂಚಿನಿಂದಲೂ ಜಾತಿಗಣತಿಯ ಅಗತ್ಯವನ್ನು ಪ್ರತಿಪಾದಿಸುತ್ತಾ ಬಂದಿದ್ದು ಅದಕ್ಕಾಗಿ ಅವರು ಸದನದ ಹೊರಗೆ ಮತ್ತು ಒಳಗೆ ಹೋರಾಡುತ್ತಲೇ ಇದ್ದಾರೆ.

ಆದಿವಾಸಿಗಳು, ದಲಿತರು ಮತ್ತು ಹಿಂದುಳಿದವರ ಸಮಸ್ಯೆಗಳನ್ನು ಯಾರು ಎತ್ತಿದರೂ ಅವರನ್ನು ನಿಂದಿಸಲಾಗುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ನಾನು ಈ ನಿಂದನೆಗಳನ್ನು ಸಂತೋಷದಿಂದ ಸ್ವೀಕರಿಸುತ್ತೇನೆ. ಅನುರಾಗ್ ಠಾಕೂರ್ ಅವರು ನನ್ನನ್ನು ನಿಂದಿಸಿದ್ದಾರೆ ಮತ್ತು ಅವಮಾನಿಸಿದ್ದಾರೆ, ಆದರೆ ನಾನು ಅವರಿಂದ ಯಾವುದೇ ಕ್ಷಮೆಯನ್ನು ಬಯಸುವುದಿಲ್ಲ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಬಿಜೆಪಿ ಮೊದಲಿನಿಂದಲೂ ಜಾತಿಗಣತಿಯ ವಿರುದ್ಧ ಮಾತನಾಡುತ್ತಾ ಬಂದಿದೆ. ಆದರೆ ಅದರ ಮಿತ್ರಪಕ್ಷ ಜೆಡಿಯು ಬಿಹಾರದಲ್ಲಿ ಇತ್ತೀಚೆಗಷ್ಟೇ ಜಾತಿಗಣತಿಯನ್ನು ಬಿಡುಗಡೆ ಮಾಡಿತ್ತು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page