Sunday, July 14, 2024

ಸತ್ಯ | ನ್ಯಾಯ |ಧರ್ಮ

ಖ್ಯಾತ ನಿರೂಪಕಿ ಅಪರ್ಣಾ ವಸ್ತಾರೆ ಇನ್ನಿಲ್ಲ, ಹಲವು ಗಣ್ಯರ ಕಂಬನಿ

ಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣಾ ವಸ್ತಾರೆ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ. ಹಲವು ದಿನಗಳಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಅಪರ್ಣಾ ತಡರಾತ್ರಿ ಬೆಂಗಳೂರಿನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಬಹಳ ದಿನಗಳಿಂದಲೂ ಗಂಭೀರ ಕ್ಯಾನ್ಸರ್ ರೋಗಕ್ಕೆ ತುತ್ತಾಗಿ ಬಳಲುತ್ತಿದ್ದ ಅಪರ್ಣಾ ಅವರು, ಬೆಂಗಳೂರು ದೂರದರ್ಶನದಲ್ಲಿ ಸೀನಿಯರ್‌ ಗ್ರೇಡ್ ನಿರೂಪಕಿಯಾಗಿದ್ದವರು. ಆಕಾಶವಾಣಿ ನಿರೂಪಕಿಯಾಗಿಯೂ ಕೆಲಸ ನಿರ್ವಹಿಸಿದ್ದ ಅವರು, ಇತ್ತೀಚೆಗೆ ಮಜಾ ಟಾಕೀಸ್‌ ಕಾರ್ಯಕ್ರಮದ ಅಭಿನಯದ ಮೂಲಕವೂ ಖ್ಯಾತಿ ಗಳಿಸಿದ್ದರು.

ಸುಮಾರು 3 ದಶಕಗಳ ಕಾಲ ಯಶಸ್ವಿ ನಿರೂಪಕಿಯಾಗಿ ನಡೆದುಕೊಂಡು ಬಂದ ಅಪರ್ಣಾ, ಈ ಮೂಲಕ ತಮ್ಮ ಕನ್ನಡ ಸೇವೆಯನ್ನು ಮುಂದುವರಿಸಿದ್ದಾರೆ. ಕಿರುತೆರೆಯಲ್ಲಿ ʻಮೂಡಲಮನೆʼ, ʻಮುಕ್ತʼ ಮುಂತಾದ ಧಾರಾವಾಹಿಗಳಲ್ಲಿ ಅಭಿನಯಿಸಿ ಖ್ಯಾತಿ ಗಳಿಸಿದ್ದರು.

2013 ರಲ್ಲಿ ಬಿಗ್‌ಬಾಸ್ ಕನ್ನಡದ ಮೊದಲ ಸೀಸನ್‌ನಲ್ಲಿ ಭಾಗವಹಿಸಿದ್ದರು. 2015 ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ `ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ಮಾಡಿ ಕನ್ನಡ ಕಲಾಪ್ರಿಯರ ಮನಗೆದ್ದಿದ್ದರು.

ಈಗಲೂ ಸಹ ಬೆಂಗಳೂರಿನ “ನಮ್ಮ ಮೆಟ್ರೋ” ದಲ್ಲಿ ಘೋಷಣೆಯಾಗುವ `ಪ್ರಯಾಣಿಕರು ಹತ್ತುವ ಮತ್ತು ಇಳಿಯುವ ಸೂಚನೆʼಗೆ ಧ್ವನಿ ಗೂಡಿಸಿದ್ದರು. 

ನಟಿ, ನಿರೂಪಕಿ ಅಪರ್ಣಾ ವಸ್ತಾರೆ ಅವರ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಪೀಪಲ್ ಮೀಡಿಯಾ ಕಡೆಯಿಂದ ಅಪರ್ಣಾ ಅವರ ನಿಧನಕ್ಕೆ ಸಂತಾಪಗಳು.

Related Articles

ಇತ್ತೀಚಿನ ಸುದ್ದಿಗಳು