Monday, June 17, 2024

ಸತ್ಯ | ನ್ಯಾಯ |ಧರ್ಮ

ಮನೀಶ್ ಸಿಸೋಡಿಯಾ ಮಧ್ಯಂತರ ಜಾಮೀನು ಅರ್ಜಿ: ಇ ಡಿ, ಸಿಬಿಐ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ಮಧ್ಯಂತರ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಜುಲೈ 28ರ ಒಳಗೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ತನ್ನ ಪ್ರತ್ರಿಕ್ರಿಯೆ ಸಲ್ಲಿಸಬೇಕೆಂದು ಸುಪ್ರೀಂ ಕೋರ್ಟ್ ಹೇಳಿದೆ.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬೇಲಾ ಎಂ ತ್ರಿವೇದಿ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು, ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಅವರು ಮನೀಶ್‌ ಅವರ ಪತ್ನಿ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಮತ್ತು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಸಲ್ಲಿಸಿದ ಮನವಿಯನ್ನು ಪರಿಗಣನೆಗೆ ತೆಗೆದುಕೊಂಡಿತ್ತು.

ಮಧ್ಯಂತರ ಜಾಮೀನು ಅರ್ಜಿಯನ್ನು ಪರಿಗಣಿಸುವುದಾಗಿ ಮತ್ತು ಅದಕ್ಕಾಗಿ ಸಿಬಿಐ ಮತ್ತು ಇಡಿಯಿಂದ ಪ್ರತಿಕ್ರಿಯೆಯನ್ನು ಕೋರುವುದಾಗಿ ಪೀಠ ಹೇಳಿದೆ. ಆರಂಭದಲ್ಲಿ, ನ್ಯಾಯಾಲಯವು ಸಾಮಾನ್ಯವಾಗಿ ನೀತಿ ನಿರ್ಧಾರಗಳಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಆದರೆ ಇಲ್ಲಿ ಬಾಹ್ಯ ಕಾರಣಗಳಿಗಾಗಿ ನೀತಿಯನ್ನು ರಚಿಸುವ ಪ್ರಕರಣವಿದೆ ಎಂದು ಹೇಳಿದರು.ಸಿಬಿಐ ಮತ್ತು ಇಡಿ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು, ಮಧ್ಯಂತರ ಜಾಮೀನು ಅರ್ಜಿಯನ್ನೂ ವಿಚಾರಣಾ ನ್ಯಾಯಾಲಯ ತಿರಸ್ಕರಿಸಿದೆ.ಆದರೆ ತನಿಖಾ ಸಂಸ್ಥೆಗಳ ಪರವಾಗಿ ಪ್ರತಿಕ್ರಿಯೆ ಸಲ್ಲಿಸುವಂತೆ ಪೀಠವು ರಾಜು ಅವರಿಗೆ ಸೂಚಿಸಿತು.

ಅಬಕಾರಿ ನೀತಿ ಹಗರಣದಲ್ಲಿ ಭಾಗಿಯಾಗಿರುವ ಆರೋಪದಡಿ ಫೆಬ್ರವರಿ 26 ರಂದು ಸಿಬಿಐ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಿತ್ತು. ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿತ್ತು. ಆ ನಂತರ ಜಾರಿ ನಿರ್ದೇಶನಾಲಯ ದಾಖಲಿಸಿದ ಪ್ರಕರಣದಲ್ಲಿ ಅವರನ್ನು ಮಾರ್ಚ್ 09ರಂದು ಬಂಧಿಸಲಾಗಿತ್ತು.

Related Articles

ಇತ್ತೀಚಿನ ಸುದ್ದಿಗಳು