ಮೋದಿ ಸರ್ನೇಮ್‌ ಪ್ರಕರಣ: ಸುಪ್ರೀಂ ಕೋರ್ಟಿನಿಂದ ಗುಜರಾತ್ ಸರ್ಕಾರ ಮತ್ತು ಪೂರ್ಣೇಶ್ ಮೋದಿಗೆ ನೋಟಿಸ್

ಮೋದಿ ಉಪನಾಮದ ಟೀಕೆಗೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಿಚಾರಣೆ ನಡೆಸಿತು. ರಾಹುಲ್ ಗಾಂಧಿ ಅರ್ಜಿಯ ಮೇರೆಗೆ ಗುಜರಾತ್ ಸರ್ಕಾರ ಮತ್ತು ಇತರರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಪೂರ್ಣೇಶ್ ಮೋದಿಗೂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ನೋಟಿಸ್‌ಗೆ ಪ್ರತಿಕ್ರಿಯೆ ನೀಡಲು ಪೂರ್ಣೇಶ್ ನ್ಯಾಯಾಲಯದಿಂದ 21 ದಿನಗಳ ಕಾಲಾವಕಾಶ ಕೋರಿದ್ದರು, ಆದರೆ ನ್ಯಾಯಾಲಯ ಅವರಿಗೆ 10 ದಿನಗಳ ಕಾಲಾವಕಾಶ ನೀಡಿದೆ. ಪ್ರಕರಣದ ಮುಂದಿನ ವಿಚಾರಣೆ ಆಗಸ್ಟ್ 4ರಂದು ನಡೆಯಲಿದೆ.

ಇದಕ್ಕೂ ಮುನ್ನ ರಾಹುಲ್ ಗಾಂಧಿ ಶಿಕ್ಷೆಗೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ವಜಾಗೊಳಿಸಿತ್ತು. ಅವರು ಈ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು.

Related Articles

ಇತ್ತೀಚಿನ ಸುದ್ದಿಗಳು