ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

2024-25 ನೇ ಸಾಲಿಗೆ ಡಾ. ಬಿ.ಆರ್.ಅಂಬೇಡ್ಕರ ಅಭಿವೃದ್ದಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ದಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ ಅನುಷ್ಠಾನ ಮಾಡುತ್ತಿರುವ ಸ್ವಯಂ ಉದ್ಯೋಗ ಯೋಜನೆಯಡಿ ನೇರಸಾಲ, ಉದ್ಯಮಶೀಲತಾ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆ, ಭೂ ಒಡೆತನ ಯೋಜನೆ, ಗಂಗಾ ಕಲ್ಯಾಣ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಸೇವಾಸಿಂಧು ಪೋರ್ಟಲ್ http://sevasindhu.karantaka.gov.in ಮೂಲಕ ಕರ್ನಾಟಕ ಒನ್, ಗ್ರಾಮ್ ಒನ್, ಹುಬ್ಬಳ್ಳಿ, ಧಾರವಾಡ ಒನ್ ಕೇಂದ್ರಗಳಲ್ಲಿ ಅಕ್ಟೋಬರ್ 10, 2024 ರೊಳಗಾಗಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಿದ ಪಲಾಪೇಕ್ಷಿಗಳ ಅರ್ಜಿಗಳನ್ನು ಮಾನ್ಯ ಶಾಸಕರ ಅಧ್ಯಕ್ಷತೆಯಲ್ಲಿರುವ ಆಯ್ಕೆ ಸಮಿತಿಯ ಮೂಲಕ ಗುರಿಗನುಗುಣವಾಗಿ ಫಲಾಪೇಕ್ಷಿಗಳನ್ನು ಆಯ್ಕೆ ಮಾಡಲಾಗುವುದು.

Related Articles

ಇತ್ತೀಚಿನ ಸುದ್ದಿಗಳು