ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಇದರ ಅಧೀನದೊಳಗೆ ಒಳಪಡುವ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಸಿದ್ಧಲಿಂಗಪ್ಪ ಅವರು ತಿಳಿಸಿದ್ದಾರೆ.
ವಿವಿಧ ನಿಗಮಗಳ ಯೋಜನೆಗಳಾದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆ(ಸ್ವ-ಸಹಾಯ ಗುಂಪುಗಳಿಗೆ), ಸ್ವಾವಲಂಬಿ ಸಾರಥಿ ಯೋಜನೆ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದು.
ಆಸಕ್ತ ಅರ್ಹ ಅಭ್ಯರ್ಥಿಗಳು ಗ್ರಾಮ ಒನ್, ಕರ್ನಾಟಕ ಒನ್‌ಗಳಲ್ಲಿ ಇಲಾಖೆಯ ವೆಬ್‌ಸೈಟ್ https://sevasindhu.karnatakata.gov.in ಮೂಲಕ ಅಕ್ಟೋಬರ್ 10ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಗರದ ಕಂಟೋನ್‌ಮೆಂಟ್‌ನ ಆದರ್ಶ ಕಾಲೋನಿಯಲ್ಲಿನ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿ ಅಥವಾ ಜಿಲ್ಲಾ ವ್ಯವಸ್ಥಾಪಕರ ಮೊ.9731494557, 9019945176 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.