ದೆಹಲಿ ಅಬಕಾರಿ ನೀತಿ ಪರಿಷ್ಕರಣೆ ವಿಚಾರದಲ್ಲಿ ತಮನ್ನು ಸಿಬಿಐ ಬಂಧಿಸಿರುವ ಕ್ರಮವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ ಕ್ರೇಜಿವಾಲ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಸಿಬಿಐ ದಾಖಲಿಸಿರುವ ಪ್ರಕರಣದಲ್ಲಿ ತಮಗೆ ಜಾಮೀನು ಮಂಜೂರು ಮಾಡಬೇಕೆಂದು ಕೋರಿ ಅರವಿಂದ ಕ್ರೇಜಿವಾಲ್ ದೆಹಲಿ ಹೈಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ದೆಹಲಿ ಅಬಕಾರಿ ನೀತಿ ಪ್ರಕರಣ ಸಂಬಂಧ ಮೂರು ದಿನಗಳ ಹಿಂದೆ ಕೇಜ್ರಿವಾಲ್ ಅವರನ್ನು ಸಿಬಿಐ ತಿಹಾರ್ ಜೈಲಿನಿಂದ ಬಂಧಿಸಿತ್ತು. ಸಿಬಿಐ ಸಂಸ್ಥೆಯ ಈ ಕ್ರಮವನ್ನು ಪ್ರಶ್ನಿಸಿ ಅವರು ನ್ಯಾಯಾಲಯದ ಮೊರೆ ಹೋಗಿದ್ದಾರೆ.
ಅಬಕಾರಿ ನೀತಿಯಲ್ಲಿ ನಡೆದ ಅವ್ಯವಹಾರ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ ಕ್ರೇಜಿವಾಲ್ ಅವರನ್ನು ಬಂಧಿಸಿತ್ತು. ದೆಹಲಿ ವಿಶೇಷ ನ್ಯಾಯಾಲಯ ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಆದರೆ ದೆಹಲಿ ಹೈಕೋರ್ಟ್ ಕೆಳಹಂತದ ನ್ಯಾಯಾಲಯ ನೀಡಿರುವ ಜಾಮೀನಿಗೆ ತಡೆಯಾಜ್ಞೆ ನೀಡಿತ್ತು.
ಆದರೆ ದೆಹಲಿ ಹೈಕೋರ್ಟ್ ಕ್ರೇಜಿವಾಲ್ ಜಾಮೀನು ನಿರಾಕರಣೆ ಮಾಡಿದೆ. ಇದನ್ನು ಪ್ರಶ್ನಿಸಿ ಅವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.