ದಲಿತರೇನು ಕ್ರಿಮಿನಲ್‌ಗಳೇ?: ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ

ಬೆಂಗಳೂರು: ಒಳಮೀಸಲಾತಿ ಆಗ್ರಹಿಸಿ ಹೋರಾಟ ನಡೆಸುತ್ತಿದ್ದ ದಲಿತ ಹೋರಾಟಗಾರರ ಮೇಲೆ ಪೊಲೀಸರ ಲಾಠಿ ಚಾರ್ಜ್‌ ಮತ್ತು ಬಂಧನವನ್ನು ವಿರೋಧಿಸಿ, ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್‌ ಘಟಕ ವಾಗ್ದಾಳಿ ನಡೆಸಿದೆ.

ಈ ಕುರಿತು ರಾಜ್ಯ ಕಾಂಗ್ರೆಸ್‌ ಘಟಕ ಟ್ವಿಟ್‌ ಮಾಡಿದ್ದು, ಒಳಮೀಸಲಾತಿ ಜಾರಿಗಾಗಿ ಆಗ್ರಹಿಸಿ ಪ್ರತಿಭಟಿಸುತ್ತಿದ್ದ ದಲಿತ ಹೋರಾಟಗಾರರ ಮೇಲೆ ಲಾಠಿ ಬೀಸಿದ  ರಾಜ್ಯ ಬಿಜೆಪಿ ಸರ್ಕಾರ ತನ್ನೊಳಗಿದ್ದ ದಲಿತರ ಮೇಲಿನ ದ್ವೇಷ, ಅಸಹನೆಯನ್ನು ಕಾರಿಕೊಂಡಿದೆ. ಸದಾಶಿವ ಆಯೋಗದ ವರದಿಯನ್ನು ಜಾರಿ ಮಾಡುತ್ತೇವೆ ಎಂದಿದ್ದ ಸರ್ಕಾರವೇ ಇಂದು ಲಾಠಿಚಾರ್ಜ್ ನಡೆಸಿ ಜಾರಿಯನ್ನು ನಿರಾಕರಿಸುವ ಸಂದೇಶ ನೀಡಿದೆ ಎಂದು ಕಿಡಿಕಾರಿದೆ.

ರಾಜ್ಯ ಬಿಜೆಪಿ ಸರ್ಕಾರದಲ್ಲಿ ಕೇಸರಿ ಶಾಲು ಹೊದ್ದು ಪುಂಡಾಟಿಕೆ ನಡೆಸುವವರಿಗೆ – ರಾಜಮರ್ಯಾದೆ ಭ್ರಷ್ಟಾಚಾರ, ಅಕ್ರಮ ನಡೆಸುವವರಿಗೆ – ರಾಜಮರ್ಯಾದೆ ರೌಡಿಗಳಿಗೆ, ಕ್ರಿಮಿನಲ್‌ಗಳಿಗೆ – ರಾಜಮರ್ಯಾದೆ ಆದರೆ ಶಾಂತಿಯಿಂದ ಪ್ರತಿಭಟಿಸುವ ದಲಿತ ಹೋರಾಟಗಾರರಿಗೆ ಮಾತ್ರ – ಲಾಠಿಏಟು. ಏಕೆ ಬಿಜೆಪಿ ದೃಷ್ಟಿಯಲ್ಲಿ ದಲಿತರು ಕ್ರಿಮಿನಲ್‌ಗಳಂತೆ ಕಾಣುವರೇ? ಎಂದು ರಾಜ್ಯ ಕಾಂಗ್ರೆಸ್‌ ಘಟಕ ಆಕ್ರೋಶ ವ್ಯಕ್ತ ಪಡಿಸಿದೆ.

Related Articles

ಇತ್ತೀಚಿನ ಸುದ್ದಿಗಳು