Sunday, April 28, 2024

ಸತ್ಯ | ನ್ಯಾಯ |ಧರ್ಮ

ರೈಲ್ವೆ ನಿಲ್ದಾಣಗಳಲ್ಲಿ ಸ್ಥಳಿಯ ಉತ್ಪನ್ನಗಳ ಮಾರಾಟಕ್ಕೆ ವ್ಯವಸ್ಥೆ : ಜಿ.ಎಂ.ಸಿದ್ದೇಶ್ವರ

ದಾವಣಗೆರೆ: ರೈಲ್ವೆ ಇಲಾಖೆ ಒಂದು ನಿಲ್ದಾಣ, ಒಂದು ಉತ್ಪನ್ನ ಯೋಜನೆ ಜಾರಿಗೆ ತಂದಿದ್ದು, ಈ ಯೋಜನೆ ಮೂಲಕ ಸ್ಥಳಿಯ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ಗುರಿ ಹೊಂದಲಾಗಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಕೇಂದ್ರ ಸರ್ಕಾರ ಘೋಷಣೆ ಮಾಡಿರುವ ವೋಕಲ್‌ ಫಾರ್‌ ಲೋಕಲ್‌ ಘೋಷಣೆಯಂತೆ ದೇಶದ 750 ರೈಲ್ವೆ ನಿಲ್ದಾಣಗಳಲ್ಲಿ ಈ ಯೋಜನೆ ಜಾರಿಗೆ ತರಲಾಗಿದೆ. ಈ ಯೋಜನೆಯಡಿಯಲ್ಲಿ ನೋಂದಾಯಿತ ಕರಕುಶಲ, ಕೈಮಗ್ಗ, ಕೃಷಿ, ಖಾದಿ, ಸಂಸ್ಕರಿಸಿದ ಆಹಾರ ಉತ್ಪನ್ನ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ದುರ್ಬಲ ವರ್ಗದ ಜನರಿಗೆ ಹೆಚ್ಚುವರಿ ಆದಾಯ ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ಸಿದ್ದೇಶ್ವರ ಅವರು ಹೇಳಿದರು.

ರಾಜ್ಯದ ಮೈಸೂರು ವಿಭಾಗದ 10 ರೈಲ್ವೆ ನಿಲ್ದಾಣಗಳಲ್ಲಿ ದಾವಣಗೆರೆಯ ನಿಲ್ದಾಣವು ಆಯ್ಕೆಯಾಗಿದ್ದು, ಅಕ್ಟೋಬರ್‌ 2ನೇ ವಾರದಿಂದ ಈ ಯೋಜನೆ ಜಾರಿ ಆಗಲಿದ್ದು, ಕನಿಷ್ಟ 15 ದಿನದಿಂದ ಗರಿಷ್ಠ 30 ದಿನ ಮಳಿಗೆಯಲ್ಲಿ ಉತ್ಪನ್ನ ಮಾರಾಟ ಮಾಡಬಹುದು. ಇದಕ್ಕಾಗಿ ಉತ್ಪನ್ನ ಮಾರಾಟಮಾಡುವವರು ಮಳಿಗೆಗೆ ನೊಂದಣಿ ಶುಲ್ಕ 1000 ರೂ, ಹಾಗೂ ವಿದ್ಯುತ್‌ ಬಿಲ್‌ ಪಾವತಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು