ಉಡುಪಿಯಲ್ಲಿ ಅಕ್ರಮವಾಗಿ ನೆಲೆಸಿದ್ದ 9 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ರಮವಾಗಿ ನೆಲೆಯೂರಲು ತೊಡಗಿದ್ದ ಅವರನ್ನ ಖಚಿತ ಮಾಹಿತಿ ಮೇರೆಗೆ ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಉಡುಪಿ ಜಿಲ್ಲೆಯ ಮಲ್ಪೆ ಬಳಿ 9 ಮಂದಿ ಬಾಂಗ್ಲಾದೇಶದ ಪ್ರಜೆಗಳ ಹಿಡಿದ ನಂತರ ಪೊಲೀಸ್ ಮೂಲಗಳು ‘ಹಲವು ದಿನಗಳಿಂದ ಇವರು ಇಲ್ಲಿ ವಾಸವಾಗಿದ್ದಾರೆ.’ ಎಂದು ತಿಳಿಸಿದೆ.
ನಕಲಿ ಆಧಾರ್ ಕಾರ್ಡ್, ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡು ಭಾರತಕ್ಕೆ ಬಂದಿದ್ದ ಬಾಂಗ್ಲಾದೇಶದ ಪ್ರಜೆಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಧಿತರನ್ನು ಹಕೀಂ ಅಲಿ, ಸುಜೋನ್, ಇಸ್ಮಾಯಿಲ್, ಕರೀಂ, ಸಲಾಂ, ರಾಜಿಕುಲ್, ಮೊಹಮ್ಮದ್ ಸೋಜಿಬ್, ಕಾಜೋಲ್, ಉಸ್ಮಾನ್ ಎಂದು ಗುರುತಿಸಲಾಗಿದ್ದು, ಮೀನುಗಾರಿಕಾ ಕಾರ್ಮಿಕರಾಗಿ ಉದ್ಯೋಗ ಅರಿಸಿಕೊಂಡು ಬಂದು ಇಲ್ಲಿ ನೆಲೆಸಿದ್ದರು. ಸದ್ಯ ವಿಚಾರಣೆ ನಡೆಸಲಾಗುತ್ತಿದೆ.