ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ಇಬ್ಬರು ಉಪನ್ಯಾಸಕರು ಮತ್ತು ಅವರ ಸ್ನೇಹಿತನನ್ನು ಮಾರತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಆಳ್ವಾಸ್ ನಲ್ಲಿ ಕಾಲೇಜು ವ್ಯಾಸಂಗ ಮುಗಿಸಿ ರಾಮನಗರದ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
ಸಾಮಾಜಿಕ ಜಾಲತಾಣದ ಮೂಲಕ ವಿಧ್ಯಾರ್ಥಿನಿಯನ್ನು ಮೊದಲು ಸಂಪರ್ಕಿಸಿದ ಭೌತಶಾಸ್ತ್ರ ಉಪನ್ಯಾಸಕ ನರೇಂದ್ರ ಬಾಬು ಆಕೆಯನ್ನು ಬೆಂಗಳೂರಿನಲ್ಲಿ ಸಂಪರ್ಕಿಸಿ ಸಲುಗೆ ಬೆಳೆಸಿದ್ದ. ಓದಿಗೆ ಸಹಾಯ ಮಾಡುವ ನೆಪದಲ್ಲಿ ಆಕೆಯ ಸಂಪರ್ಕಿಸಿ ಬೆಂಗಳೂರಿನ ಮಾರತ್‌ಹಳ್ಳಿಯಲ್ಲಿರುವ ಗೆಳೆಯನ ರೂಮ್‌ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ.
ಆ ನಂತರ ಈ ವಿಷಯವನ್ನು ತನ್ನ ಮತ್ತೊರ್ವ ಸಹೋದ್ಯೋಗಿ ಸ್ನೇಹಿತ ಜೀವಶಾಸ್ತ್ರ ಉಪನ್ಯಾಸಕ ಸಂದೀಪ್ ಗೆ ವಿಷಯ ತಿಳಿಸಿದ್ದಾನೆ. ಸಂದೀಪ್ ಗೆ ನರೇಂದ್ರ ಬಾಬು ಆಕೆಯ ಕೆಲವು ಖಾಸಗಿ ಫೋಟೋ ತೋರಿಸಿ ಬ್ಲಾಕ್‌ಮೇಲ್ ಮಾಡಲು ಉತ್ತೇಜಿಸಿದ್ದಾನೆ. ಆ ನಂತರ ಸಂದೀಪ್ ಆಕೆಯನ್ನು ಸಂಪರ್ಕಿಸಿ ಅನೂಪ್ ರೂಮಿನಲ್ಲಿ ಅತ್ಯಾಚಾರ ಎಸಗಿದ್ದ. ನಂತರ ಅನೂಪ್ ಆಕೆಯನ್ನು ಸಂರ್ಪಕಿಸಿ ನೀನು ನನ್ನ ರೂಮಿಗೆ ಬಂದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಷ್ಟೇ ಅಲ್ಲದೇ ನನ್ನ ರೂಮ್ನಲ್ಲಿ ಸಿಸಿಟಿವಿ ಇದೆ ಎಂದು ಬೆದರಿಕೆ ಹಾಕಿದ್ದ. ನಂತರ ಅನೂಪ್ ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಾನೆ.
ಈ ಬೆಳವಣಿಗೆ ಹೀಗೇ ಮುಂದುವರೆದರೆ ಮುಂದಿನ ಅಪಾಯ ಅರಿತ ಯುವತಿ ತನ್ನ ಪೋಷಕರಿಗೆ ವಿಷಯ ಮುಟ್ಟಿಸಿ, ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ಮಹಿಳಾ ಆಯೋಗದಲ್ಲಿ ಕೌನ್ಸಿಲಿಂಗ್ ಮಾಡಿದ ಬಳಿಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರಿನ ಆಧಾರದಲ್ಲಿ ಉಪನ್ಯಾಸಕರಾದ ಕೊಪ್ಪ ಮೂಲದ ನರೇಂದ್ರ ಬಾಬು, ಸಂದೀಪ್ ಮತ್ತು ಸ್ನೇಹಿತ ಅನೂಪ್‌ನನ್ನು ಬಂಧಿಸಿದ್ದಾರೆ.